ಬಿಜಾಪುರ (ಛತ್ತೀಸ್‌ಗಢ) – ಮೇ 6 ರ ರಾತ್ರಿ ಇಲ್ಲಿನ ಕರೇಗುಟ್ಟದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು 18 ಕ್ಕೂ ಹೆಚ್ಚು ನಕ್ಸಲರನ್ನು ಹತ್ಯೆ ಮಾಡಿದ್ದಾರೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. ಹತ್ಯೆಗೀಡಾದ ನಕ್ಸಲರಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದಾಗ್ಯೂ, ಸ್ಥಳೀಯ ಪೊಲೀಸರು ಇದುವರೆಗೂ ಈ ಎನ್‌ಕೌಂಟರ್ ಅನ್ನು ಅಧಿಕೃತವಾಗಿ ದೃಢಪಡಿಸಿಲ್ಲ.