ವಿದೇಶಾಂಗ ಸಚಿವ ಡಾ. ಜಯಶಂಕರ ಅವರಿಂದ ಇರಾನ ವಿದೇಶಾಂಗ ಸಚಿವರಿಗೆ ಸ್ಪಷ್ಟ ಶಬ್ದಗಳಲ್ಲಿ ಸಂದೇಶ

ನವದೆಹಲಿ – ಭಾರತದ ‘ಆಪರೇಷನ್ ಸಿಂಧೂರ್’ ಕ್ರಮದ ಸಂಬಂಧದಲ್ಲಿ ಪಾಕಿಸ್ತಾನವು ಯಾವುದೇ ಪ್ರತೀಕಾರದ ಕ್ರಮ ಕೈಗೊಂಡರೆ, ಭಾರತ ಸುಮ್ಮನೆ ಕೂರುವುದಿಲ್ಲ ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಭಾರತದ ಪ್ರವಾಸದಲ್ಲಿರುವ ಇರಾನ್‌ನ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಘಚಿ ಅವರಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ಇರಾನ ಪಾಕಿಸ್ತಾನಕ್ಕಾಗಿ ಮಧ್ಯಸ್ಥಿಕೆ ವಹಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಲಾಗುತ್ತಿರುವ ಸಂದರ್ಭದಲ್ಲಿ ಭಾರತವು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಡಾ. ಜೈಶಂಕರ್ ಅವರು, ಈ ಪರಿಸ್ಥಿತಿಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶ ನಮಗಿಲ್ಲ. ನೆರೆಯ ಮತ್ತು ಹತ್ತಿರದ ಪಾಲುದಾರರಾಗಿ ಪರಿಸ್ಥಿತಿಯ ಉತ್ತಮ ತಿಳುವಳಿಕೆ ಹೊಂದುವುದು ಮುಖ್ಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮೊದಲು, ವಿದೇಶಾಂಗ ಸಚಿವ ಡಾ. ಜೈಶಂಕರ್ ಅವರು ಚೀನಾಕ್ಕೂ, ಪಾಕಿಸ್ತಾನವು ಪ್ರತಿಕ್ರಿಯಿಸಿದರೆ ಭಾರತವು ಸೂಕ್ತ ಉತ್ತರ ನೀಡುತ್ತದೆ ಎಂದು ತಿಳಿಸಿದ್ದರು. ಜಗತ್ತು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ತೋರಿಸಬೇಕು, ಎಂದು ಹೇಳಿದರು.
ಸಂಪಾದಕೀಯ ನಿಲುವುಭಾರತವು ಯಾವಾಗಲೂ ಇಂತಹ ನಿಲುವನ್ನು ತೆಗೆದುಕೊಳ್ಳಬೇಕು. ಅಷ್ಟೇ ಅಲ್ಲ, ಭಾರತದ ಮೇಲೆ ದಾಳಿ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ದೊರೆತ ಕೂಡಲೇ ಭಾರತವು ಮೊದಲೇ ದಾಳಿ ಮಾಡುವಂತಹ ಕ್ರಮವನ್ನು ತೆಗೆದುಕೊಳ್ಳುವುದು ಈಗ ಅವಶ್ಯಕವಾಗಿದೆ! |
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ