Ceasefire After US Mediation : ಅಮೇರಿಕದ ಮಧ್ಯಸ್ಥಿಕೆಯ ನಂತರ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ!

ನವ ದೆಹಲಿ – ಮೇ 6 ರ ರಾತ್ರಿಯಿಂದ ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾಗಿದ್ದ ಯುದ್ಧದಂತಹ ಪರಿಸ್ಥಿತಿ ಹೆಚ್ಚಾಗುತ್ತಿದ್ದಂತೆ, ಅಮೇರಿಕದ ಮಧ್ಯಸ್ಥಿಕೆಯ ನಂತರ ಇಬ್ಬರೂ ಕದನ ವಿರಾಮದ ನಿರ್ಧಾರ ತೆಗೆದುಕೊಂಡಿದ್ದಾರೆ. ಭಾರತದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಮಾಹಿತಿ ನೀಡಿದರು. ಮೇ 10 ರ ಸಂಜೆ 5 ರಿಂದ ಈ ಕದನ ವಿರಾಮ ಜಾರಿಗೆ ಬಂದಿದೆ. ಮೂಲಗಳ ಪ್ರಕಾರ, ಭಾರತವು ಇದಕ್ಕಾಗಿ ಕೆಲವು ಷರತ್ತುಗಳನ್ನು ವಿಧಿಸಿ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ ಎಂದು ಹೇಳಲಾಗುತ್ತಿದೆ. ಈ ಷರತ್ತುಗಳು ಯಾವುವು ಎಂಬುದು ಸ್ಪಷ್ಟವಾಗಿಲ್ಲ.

ಇದಕ್ಕೂ ಮೊದಲು ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ‘ಎಕ್ಸ್’ ನಲ್ಲಿ ಈ ಕುರಿತು ಪೋಸ್ಟ್ ಮಾಡಿ ಮಾಹಿತಿ ನೀಡಿದ್ದರು.

ಟ್ರಂಪ್ ಹೇಳಿದರು,

ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವುದನ್ನು ಘೋಷಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಎರಡೂ ದೇಶಗಳು ಸಾಮಾನ್ಯ ಜ್ಞಾನ ಮತ್ತು ಉತ್ತಮ ವಿವೇಕವನ್ನು ತೋರಿಸಿದ್ದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.