|
ನವದೆಹಲಿ – ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದೆ. ಈಗ ಪಾಕಿಸ್ತಾನ ಈ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳಲು ಪತ್ರ ಬರೆದಿದೆ. ಪಾಕಿಸ್ತಾನದ ಜಲಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಸೈಯದ ಅಲಿ ಮುರ್ತುಜಾ ಅವರು ಭಾರತದ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದು, ‘ಭಾರತವು ಸಿಂಧೂ ಜಲ ಒಪ್ಪಂದದ ಮೇಲಿನ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಪಾಕಿಸ್ತಾನದ ಅನೇಕ ಭಾಗಗಳಲ್ಲಿ ಗಂಭೀರ ನೀರಿನ ಬಿಕ್ಕಟ್ಟು ಉಂಟಾಗಬಹುದು. ಆದ್ದರಿಂದ ಭಾರತವು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ವಿನಂತಿಸಿದ್ದಾರೆ.
ಭಾರತವು ಸಿಂಧೂ ಜಲ ಒಪ್ಪಂದದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಪಾಕಿಸ್ತಾನದ ಅನೇಕ ಭಾಗಗಳಲ್ಲಿ ತೀವ್ರ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ. ಇದರ ಅತಿ ಹೆಚ್ಚು ಪರಿಣಾಮ ಪಾಕಿಸ್ತಾನದ ಪಂಜಾಬ್ ರಾಜ್ಯದ ಮೇಲೆ ಬೀರುತ್ತದೆ. 3 ದಿನಗಳ ಹಿಂದೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡುತ್ತಾ, ರಕ್ತ ಮತ್ತು ನೀರು ಯಾವುದೇ ಪರಿಸ್ಥಿತಿಯಲ್ಲಿ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಹೇಳಿದ್ದರು.
ಸಂಪಾದಕೀಯ ನಿಲುವು
|