
ನವದೆಹಲಿ – ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಭಾರತವು ಅಫ್ಘಾನಿಸ್ತಾನದೊಂದಿಗೆ ಎಲ್ಲಾ ರೀತಿಯ ಸಂಬಂಧಗಳನ್ನು ಕಡಿದುಕೊಂಡಿತ್ತು; ಆದರೆ ಈಗ ಎರಡೂ ದೇಶಗಳ ನಡುವಿನ ಸಂಬಂಧಗಳು ಸಹಜ ಸ್ಥಿತಿಗೆ ಮರಳುವ ಲಕ್ಷಣಗಳು ಕಾಣುತ್ತಿವೆ. ಭಾರತವು ಅಫ್ಘಾನಿಸ್ತಾನದ ನಾಗರಿಕರಿಗೆ ಭಾರತದ ವೀಸಾ ನೀಡುವ ನಿರ್ಧಾರ ಕೈಗೊಂಡಿದೆ. ಭಾರತ ಸರಕಾರದ ‘ನ್ಯೂ ಅಫ್ಘಾನ್ ವೀಸಾ’ ನೀತಿಯ ಅಡಿಯಲ್ಲಿ ಈ ಸೇವೆಯನ್ನು ಪ್ರಾರಂಭಿಸಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬರಲು ಬಯಸುವ ಅಫ್ಘಾನಿಸ್ತಾನದ ನಾಗರಿಕರಿಗೆ ವೀಸಾ ನೀಡಲಾಗುವುದು. ಹಾಗೆಯೇ ವಿದ್ಯಾರ್ಥಿಗಳು ಮತ್ತು ವ್ಯಾಪಾರಿಗಳಿಗೂ ವೀಸಾ ನೀಡಲಾಗುವುದು. ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಕಳೆದ 5 ವರ್ಷಗಳಿಂದ ಭಾರತ ಮತ್ತು ಅಫ್ಘಾನಿಸ್ತಾನದ ನಡುವಿನ ವೀಸಾ ಸೇವೆ ಸ್ಥಗಿತಗೊಂಡಿತ್ತು.
1. ಕಳೆದ ಕೆಲವು ತಿಂಗಳಿಂದ ಭಾರತ ಮತ್ತು ಅಫ್ಘಾನಿಸ್ತಾನದ ನಡುವಿನ ಸಂಬಂಧಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಭಾರತದ ‘ಆಪರೇಷನ್ ಸಿಂದೂರ್’ಗೆ ಅಫ್ಘಾನಿಸ್ತಾನ ಬೆಂಬಲ ನೀಡಿತ್ತು. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತಾಲಿಬಾನ್ ಸರಕಾರ ಖಂಡಿಸಿತ್ತು, ಅಲ್ಲದೆ ತಾಲಿಬಾನ್ ಸರಕಾರವು ಭಾರತಕ್ಕೆ ‘ಅಫ್ಘಾನಿಸ್ತಾನದ ನೆಲದಿಂದ ಭಾರತ ವಿರೋಧಿ ಚಟುವಟಿಕೆಗಳು ನಡೆಯಲು ಬಿಡುವುದಿಲ್ಲ’ ಎಂದು ಭರವಸೆ ನೀಡಿತ್ತು.
2. ಅಫ್ಘಾನಿಸ್ತಾನದೊಂದಿಗಿನ ಭಾರತದ ಸಂಬಂಧಗಳು ಸುಧಾರಿಸುತ್ತಿರುವಾಗ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಖೈಬರ್ ಪಖ್ತೂನ್‌ಖ್ವಾ ಪ್ರಾಂತ್ಯದಲ್ಲಿರುವ ಭಯೋತ್ಪಾದಕರು ಮತ್ತು ಗಡಿ ವಿವಾದದಿಂದಾಗಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಉದ್ವಿಗ್ನತೆ ಇದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !