
ನವದೆಹಲಿ – ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅವರು ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಭಾರತ ಸರಕಾರವು ಜಮ್ಮು ಮತ್ತು ಕಾಶ್ಮೀರದಿಂದ ಕಲಂ 370 (ವಿಧಿ 370) ಅನ್ನು ತೆಗೆದುಹಾಕಿದ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಅವರು, “ಕಲಂ 370 ಕಾಶ್ಮೀರದಲ್ಲಿ ದೊಡ್ಡ ಸಮಸ್ಯೆಯಾಗಿತ್ತು. ಇದು ‘ಕಾಶ್ಮೀರ ದೇಶದ ಇತರ ಭಾಗಗಳಿಗಿಂತ ಭಿನ್ನವಾಗಿದೆ’ ಎಂಬ ಭಾವನೆಯನ್ನು ಸೃಷ್ಟಿಸಿತ್ತು. 2019 ರಲ್ಲಿ ಕಲಂ 370 ಅನ್ನು ತೆಗೆದುಹಾಕಿದ ನಂತರ, ಈ ಕಲ್ಪನೆ ಕೊನೆಗೊಂಡಿತು. ನಂತರ ಚುನಾವಣೆಗಳು ನಡೆದವು ಮತ್ತು ಶೇಕಡ 65 ರಷ್ಟು ಜನರು ಮತ ಚಲಾಯಿಸಿದರು. ಈಗ ಕಾಶ್ಮೀರದಲ್ಲಿ ಚುನಾಯಿತ ಸರಕಾರವಿದೆ. ಕೆಲವರು ಕಾಶ್ಮೀರದಲ್ಲಿ ಕಲಂ 370 ಅನ್ನು ಮತ್ತೆ ಜಾರಿಗೆ ತರಲು ಬಯಸುತ್ತಿದ್ದಾರೆ, ಇದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಅವರಿಗೆ ಕಾಶ್ಮೀರದಲ್ಲಿ ಸಮೃದ್ಧಿಯನ್ನು ನೋಡಲು ಇಷ್ಟವಿಲ್ಲ” ಎಂದು ಹೇಳಿದರು. ಖುರ್ಷಿದ್ ಅವರು ಇಂಡೋನೇಷ್ಯಾದ ಚಿಂತಕರ ಮುಂದೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ.
ಆಪರೇಷನ್ ಸಿಂದೂರ್ ನಂತರ, ಭಾರತದ ನಿಲುವನ್ನು ಇಡೀ ಜಗತ್ತು ಅರ್ಥಮಾಡಿಕೊಳ್ಳಬೇಕು ಮತ್ತು ಪಾಕಿಸ್ತಾನದ ಭಯೋತ್ಪಾದಕ ಮುಖವನ್ನು ಜಗತ್ತಿಗೆ ತೋರಿಸಬೇಕು ಎಂಬ ಉದ್ದೇಶದಿಂದ, ಭಾರತದ ಸರ್ವಪಕ್ಷ ನಿಯೋಗಗಳು ಜಗತ್ತಿನ ವಿವಿಧ ದೇಶಗಳಿಗೆ ಭೇಟಿ ನೀಡಿ ಭಾರತದ ನಿಲುವನ್ನು ಮಂಡಿಸುತ್ತಿವೆ. ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅವರೊಂದಿಗೆ ಜನತಾ ದಳ (ಯುನೈಟೆಡ್) ನ ಸಂಜಯ ಕುಮಾರ ಝಾ ಅವರು ಮಲೇಷ್ಯಾ, ಇಂಡೋನೇಷ್ಯಾ, ದಕ್ಷಿಣ ಕೊರಿಯಾ, ಜಪಾನ್ ಮತ್ತು ಸಿಂಗಾಪುರಕ್ಕೆ ಭೇಟಿ ನೀಡುತ್ತಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”