|

ಮಂಗಳೂರು (ಕರ್ನಾಟಕ) – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ. ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ 15 ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನೂತನ ಪೊಲೀಸ್ ವರಿಷ್ಠಾಧಿಕಾರಿ ಅರುಣ ಅವರು ಮಧ್ಯರಾತ್ರಿಯೇ ಹಿಂದೂ ಸಂಘಟನೆಗಳ ನಾಯಕರ ಮನೆಗಳಿಗೆ ಭೇಟಿ ನೀಡಿ ಅವರ ಜೊತೆ ಅಪರಾಧಿಗಳಂತೆ ವರ್ತಿಸಿದರು. ಪೊಲೀಸರ ಈ ಕ್ರಮವನ್ನು ವಿರೋಧಿಸಿ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ್ದ ಹಿಂದೂಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಪೂರ್ವಾನುಮತಿ ಇಲ್ಲದೆ ಅಕ್ರಮವಾಗಿ ಗುಂಪು ಸೇರಿ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಲಾಗಿದೆ ಎಂದು ದೂರಿನಲ್ಲಿ ನಮೂದಿಸಲಾಗಿದೆ. (ಮುಸ್ಲಿಮರ ಮೇಲೆ ಅನ್ಯಾಯವಾಗಿದೆ ಎಂದು ಆರೋಪಿಸಿ ಅವರ ಗುಂಪು ಪೊಲೀಸ್ ಠಾಣೆಯನ್ನು ಮುತ್ತಿಗೆ ಹಾಕಿದಾಗ ಇದೇ ಪೊಲೀಸರು ಬಿಲದಲ್ಲಿ ಸೇರಿಕೊಳ್ಳುತ್ತಾರೆ. ಕರ್ನಾಟಕ ಪೊಲೀಸರ ಈ ಹಿಂದೂ ದ್ವೇಷವನ್ನು ಗಮನದಲ್ಲಿಟ್ಟುಕೊಳ್ಳಿ! – ಸಂಪಾದಕರು)

1.ಕೆಲವು ದಿನಗಳ ಹಿಂದೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯಾಗಿತ್ತು. ಅವರಿಗೆ ಶ್ರದ್ಧಾಂಜಲಿ ಅರ್ಪಿಸುವಾಗ ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.
2.ಶೆಟ್ಟಿ ಅವರ ಹತ್ಯೆಗೆ ಪ್ರತೀಕಾರವಾಗಿ ಅಬ್ದುಲ್ ರೆಹಮಾನ್ ಹತ್ಯೆಯಾಗಿದೆ ಎಂದು ಸ್ಥಳೀಯ ಮುಸ್ಲಿಂ ನಾಯಕರು ಆರೋಪಿಸಿದ್ದಾರೆ.
3.ಪೊಲೀಸರು ಹಿಂದೂ ಕಾರ್ಯಕರ್ತರ ಮನೆಗಳಿಗೆ ಮಧ್ಯರಾತ್ರಿ ಹಠಾತ್ ಭೇಟಿ ನೀಡಿ ವಿಚಾರಣೆ ನಡೆಸಿದರು. ಪೊಲೀಸರ ಈ ಕ್ರಮವನ್ನು ಸ್ಥಳೀಯ ಹಿಂದೂ ಕಾರ್ಯಕರ್ತರು ತೀವ್ರವಾಗಿ ವಿರೋಧಿಸಿದ್ದಾರೆ.
4.ಈ ಹಿನ್ನೆಲೆಯಲ್ಲಿ ಪೊಲೀಸರು 15 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ್ ನೂಜಿಬಾಳ್ತಿಲ್, ಮಹೇಶ್ ಕುಟ್ರುಪ್ಪಾಡಿ, ಡಿಕೆ ಅಯ್ಯ ನೂಜಿಬಾಳ್ತಿಲ್, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯಾ ನಂದುಗುರಿ, ಉಮೇಶ್ ನೂಜಿಬಾಳ್ತಿಲ್, ರಾಧಾಕೃಷ್ಣ ಕೆ., ಜಯಂತ್ ಸೇರಿದಂತೆ ಇತರೆ ಮೂವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
|
ಅನ್ಯಾಯದ ವಿರುದ್ಧ ಪ್ರತಿಭಟನೆ ಅನಿವಾರ್ಯ! – ವಿಶ್ವ ಹಿಂದೂ ಪರಿಷತ್ ಈ ಸಂಬಂಧ ವಿಎಚ್‌ಪಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ ಮಾತನಾಡಿ, ಪೊಲೀಸರು ರಾತ್ರಿ ಇದ್ದಕ್ಕಿದ್ದಂತೆ ಹಿಂದೂ ಕಾರ್ಯಕರ್ತರ ಮನೆಗಳಿಗೆ ಬಂದು ವಿಚಾರಣೆ ನಡೆಸುತ್ತಿದ್ದಾರೆ. ಅವರನ್ನು ಅಪರಾಧಿಗಳೆಂದು ಶಂಕಿತ ದೃಷ್ಟಿಯಿಂದ ನೋಡಲಾಗುತ್ತಿದೆ. ಇದರಿಂದ ಅವರ ಕುಟುಂಬಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಭವಿಷ್ಯದಲ್ಲಿ ನಾವು ಪ್ರತಿಭಟನೆ ಮಾಡುವುದು ಅನಿವಾರ್ಯ ಎಂದು ಹೇಳಿದರು. |
ಸಂಪಾದಕೀಯ ನಿಲುವು
|
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!