
ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿನ ಭವ್ಯ ಶ್ರೀರಾಮ ಮಂದಿರದ ಮೊದಲ ಮಹಡಿಯಲ್ಲಿ ಜೂನ್ 5 ರಂದು ಬೆಳಗ್ಗೆ 11.25 ರಿಂದ 11.40 ರ ಶುಭ ಮುಹೂರ್ತದಲ್ಲಿ ರಾಮ ದರ್ಬಾರ್ ಪ್ರತಿಷ್ಠಾಪಿಸಲಾಯಿತು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ದರ್ಬಾರ್ ಪೂಜೆ ನೆರವೇರಿಸಿದರು. ಈ ದರ್ಬಾರದಲ್ಲಿ ಭಗವಾನ್ ಶ್ರೀರಾಮ, ಮಾತಾ ಸೀತೆ, ಲಕ್ಷ್ಮಣ, ಭರತ, ಶತ್ರುಘ್ನ ಹಾಗೂ ಹನುಮಾನ್ ಜೀ ಅವರ ವಿಗ್ರಹಗಳಿವೆ. ಈ ಸಂದರ್ಭದಲ್ಲಿ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಪ.ಪೂ. ಗೋವಿಂದದೇವ ಗಿರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕಾಗಿ 350 ಜನರನ್ನು ಆಹ್ವಾನಿಸಲಾಗಿತ್ತು. ಅವರಲ್ಲಿ ಹೆಚ್ಚಿನವರು ಟ್ರಸ್ಟ್‌ನ ಅಧಿಕಾರಿಗಳು ಮತ್ತು ಸಂತರಾಗಿದ್ದರು. ರಾಮ ದರ್ಬಾರ್‌ನ ವಿಗ್ರಹಗಳನ್ನು ಜೈಪುರದಲ್ಲಿ ತಯಾರಿಸಲಾಗಿದೆ. ಈ ವಿಗ್ರಹಗಳನ್ನು ಮಕರಾನದ ಬಿಳಿ ಅಮೃತಶಿಲೆಯಿಂದ ಕೆತ್ತಲಾಗಿದೆ. ಭಗವಾನ್ ಶ್ರೀರಾಮ ಮತ್ತು ಸೀತೆ ಸಿಂಹಾಸನದಲ್ಲಿ ವಿರಾಜಮಾನರಾಗಿದ್ದಾರೆ. ಭರತ ಮತ್ತು ಹನುಮಾನ್ ಭಗವಾನ್ ಶ್ರೀರಾಮನ ಪಾದದ ಬಳಿ ಕುಳಿತಿದ್ದಾರೆ.
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ