ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿದ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ !

ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ‘ಸಣ್ಣ ಮಾದರಿ’ ಎಂದು ಕರೆದಿದ್ದಾರೆ. ಜೂನ್ 4 ರಂದು ವಿಶ್ವಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭುಟ್ಟೋ, ಮೋದಿ ತಮ್ಮನ್ನು ಇಸ್ರೇಲಿ ಪ್ರಧಾನಿಯಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ, ಆದರೆ ಅವರು ಅವರ ಹತ್ತಿರವೂ ಇಲ್ಲ. “ಭಾರತ ಸರಕಾರವು ಕೆಟ್ಟ ಉದಾಹರಣೆಗಳಿಂದ ಪ್ರೇರಿತವಾಗಬಾರದು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಬಿಲಾವಲ್ ಭುಟ್ಟೋ ಹೇಳಿದರು.
ಭಾರತವು ಬಿಲಾವಲ್ ಭುಟ್ಟೋ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ. ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ದೇಶದ ನೀತಿಯ ಭಾಗವನ್ನಾಗಿ ಮಾಡಿರುವ ಭಯೋತ್ಪಾದಕ ನಾಯಕರ ಬಗ್ಗೆ ಭುಟ್ಟೋ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಬೇಕು ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಸಂಪಾದಕೀಯ ನಿಲುವುಕಾಗೆಯ ಶಾಪದಿಂದ ಹಸು ಸಾಯುವುದಿಲ್ಲ ಎಂಬಂತೆ ಇದೊಂದು ಬಗೆಯಾಗಿದೆ! ಆದರೂ, ನೆತನ್ಯಾಹು ಹಮಾಸ್ ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದಂತೆ, ಭಾರತವೂ ಪಾಕಿಸ್ತಾನವನ್ನು ನಾಶಪಡಿಸಲು ಯೋಜಿಸಬೇಕು ಮತ್ತು ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು! |
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು