ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಇರಾನ್‌ಗೆ ಎಚ್ಚರಿಕೆ

ವಾಷಿಂಗ್ಟನ್ (ಅಮೆರಿಕ) – ಇರಾನ್ ಮೇಲೆ ನಡೆದ ದಾಳಿಗಳೊಂದಿಗೆ ಅಮೆರಿಕಕ್ಕೆ ಯಾವುದೇ ಸಂಬಂಧವಿಲ್ಲ. ಒಂದು ವೇಳೆ ಇರಾನ್ ಅಮೆರಿಕದ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರೆ, ಅಮೆರಿಕದ ಸೇನೆ ಪೂರ್ಣ ಶಕ್ತಿಯೊಂದಿಗೆ ಪ್ರತಿದಾಳಿ ಮಾಡುತ್ತದೆ. ಇತಿಹಾಸದಲ್ಲಿ ಹಿಂದೆಂದೂ ಕಂಡಿರದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. “ಇರಾನ್ ಮತ್ತು ಇಸ್ರೇಲ್ ನಡುವೆ ನಾವು ಸುಲಭವಾಗಿ ಒಪ್ಪಂದ ಮಾಡಿಕೊಳ್ಳಬಹುದು ಮತ್ತು ಈ ರಕ್ತಸಿಕ್ತ ಸಂಘರ್ಷವನ್ನು ನಿಲ್ಲಿಸಬಹುದು” ಎಂದು ಟ್ರಂಪ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.
ಇಸ್ರೇಲ್‌ನ ಈ ದಾಳಿಗಳು ಮುಂದುವರಿದರೆ, ನಾವು ಅಮೆರಿಕದೊಂದಿಗೆ ಯಾವುದೇ ಅಣು ಮಾತುಕತೆ ನಡೆಸುವುದಿಲ್ಲ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜೇಶ್‌ಕಿಯಾನ್ ಸ್ಪಷ್ಟಪಡಿಸಿದ್ದಾರೆ. ಇರಾನ್ ರಾಜತಂತ್ರಕ್ಕೆ ಆದ್ಯತೆ ನೀಡುತ್ತದೆ; ಆದರೆ ಒತ್ತಡದಲ್ಲಿ ಅವಿವೇಕದ ಬೇಡಿಕೆಗಳನ್ನು ಸ್ವೀಕರಿಸುವುದಿಲ್ಲ, ಎಂದು ಹೇಳಿದೆ.
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !