ನವದೆಹಲಿ – ಅಮೆರಿಕವು ಇರಾನ್ ಮೇಲೆ ದಾಳಿ ಮಾಡಿದ ನಂತರ, ಪ್ರಧಾನಿ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಪ್ರಧಾನಿ ಮೋದಿ ‘ಎಕ್ಸ್’ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಅವರು, “ನಾನು ಇರಾನ್ ಅಧ್ಯಕ್ಷರೊಂದಿಗೆ ಮಾತನಾಡಿದೆ. ನಾವು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರವಾಗಿ ಚರ್ಚಿಸಿದ್ದೇವೆ ಮತ್ತು ಉದ್ವಿಗ್ನತೆ ಹೆಚ್ಚಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದೇನೆ. ನಾನು ಉದ್ವಿಗ್ನತೆಯನ್ನು ಕಡಿಮೆ ಮಾಡಲು, ಸಂಭಾಷಣೆ ಮತ್ತು ರಾಜತಾಂತ್ರಿಕತೆಗೆ ಆದ್ಯತೆ ನೀಡಲು ಕರೆ ನೀಡಿದ್ದು ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಆದಷ್ಟು ಬೇಗ ಮರುಸ್ಥಾಪಿಸುವ ಅಗತ್ಯದ ಬಗ್ಗೆ ಒತ್ತಿಹೇಳಿದೆ” ಎಂದು ಹೇಳಿದರು.
ಇರಾನ್ ನ ವಿದೇಶಾಂಗ ಸಚಿವರು ರಷ್ಯಾಕ್ಕೆ ಭೇಟಿ ನೀಡಿ ಪುಟಿನ್ ಅವರೊಂದಿಗೆ ಚರ್ಚಿಸಲಿದ್ದಾರೆ
ಇರಾನ್ ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಕ್ಚಿ ರಷ್ಯಾಕ್ಕೆ ತೆರಳಲಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾವು ರಷ್ಯಾಕ್ಕೆ ತೆರಳಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ರಷ್ಯಾ ಇರಾನ್‌ನ ಮಿತ್ರರಾಷ್ಟ್ರ. ಇರಾನ್ ಮತ್ತು ರಷ್ಯಾ ಯಾವಾಗಲೂ ಪರಸ್ಪರ ಸಮಾಲೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ, ಎಂದಿದ್ದಾರೆ.