
ಬೀಜಿಂಗ್ (ಚೀನಾ) – ಭಾರತ ಮತ್ತು ಚೀನಾ ನಡುವಿನ ಸಂಬಂಧಗಳಲ್ಲಿ ಸಕಾರಾತ್ಮಕ ಗತಿಯನ್ನು ಕಾಯ್ದುಕೊಳ್ಳುವ ಮತ್ತು ಉಭಯ ದೇಶಗಳಲ್ಲಿ ಜಟಿಲತೆಯನ್ನು ತಪ್ಪಿಸುವ ಅಗತ್ಯವನ್ನು ನಾವು ಆದ್ಯತೆ ನೀಡಿದ್ದೇವೆ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೆ ನೀಡಿದ್ದಾರೆ. ಚೀನಾದಲ್ಲಿ ನಡೆದ ‘ಶಾಂಘೈ ಸಹಕಾರ ಸಂಘಟನೆ’ಯ ಸಭೆಯ ಸಂದರ್ಭದಲ್ಲಿ ರಾಜನಾಥ ಸಿಂಗ್ ಮತ್ತು ಚೀನಾದ ರಕ್ಷಣಾ ಸಚಿವ ಅಡ್ಮಿರಲ್ ಡಾಂಗ್ ಜುನ್ ಅವರ ಭೇಟಿಯ ನಂತರ ಸಿಂಗ್ ಅವರು ಈ ಹೇಳಿಕೆ ನೀಡಿದ್ದಾರೆ.
Held talks with Admiral Don Jun, the Defence Minister of China, on the sidelines of SCO Defence Minitsers’ Meeting in Qingdao. We had a constructive and forward looking exchange of views on issues pertaining to bilateral relations.
Expressed my happiness on restarting of the… pic.twitter.com/dHj1OuHKzE
— Rajnath Singh (@rajnathsingh) June 27, 2025
ರಕ್ಷಣಾ ಸಚಿವ ಸಿಂಗ್ ಮಾತು ಮುಂದುವರೆಸಿ, ನಮ್ಮ ನಡುವೆ ರಚನಾತ್ಮಕ ಮತ್ತು ಭವಿಷ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. 6 ವರ್ಷಗಳ ಸುದೀರ್ಘ ಅವಧಿಯ ನಂತರ ಕೈಲಾಸ್ ಮಾನ ಸರೋವರ ಯಾತ್ರೆ ಪುನರಾರಂಭಗೊಂಡಿರುವುದಕ್ಕೆ ನಾನು ಡಾಂಗ್ ಜುನ್ ಅವರ ಬಳಿ ಸಂತೋಷ ವ್ಯಕ್ತಪಡಿಸಿದೆ, ಎಂದು ತಿಳಿಸಿದರು.
ಚೀನಾ ಕೂಡ ಹೇಳಿಕೆ ನೀಡಿದ್ದು, ಚೀನಾ ಭಾರತದೊಂದಿಗೆ ಸಂಘರ್ಷ ನಡೆಸಲು ಬಯಸುವುದಿಲ್ಲ. ಸಂವಾದ ಮತ್ತು ಪರಸ್ಪರ ವಿಶ್ವಾಸವನ್ನು ಹೆಚ್ಚಿಸುವುದು ಚೀನಾದ ಉದ್ದೇಶ ಎಂದು ಹೇಳಿದೆ.
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಪಾಸ್ಪೋರ್ಟ್ನಿಂದ ಪೌರತ್ವ ಸಾಬೀತಾಗುವುದಿಲ್ಲ! – ಕೇಂದ್ರ ಸರಕಾರ
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!