ಇರಾನ್‌ನಿಂದ ಅಮೇರಿಕಾಗೆ ಎಚ್ಚರಿಕೆ

ತೆಹರಾನ (ಇರಾನ್) – ಭವಿಷ್ಯದಲ್ಲಿ ಅಮೆರಿಕ ನಮ್ಮ ಮೇಲೆ ದಾಳಿ ಮಾಡಿದರೆ, ಮಧ್ಯಪ್ರಾಚ್ಯದಲ್ಲಿರುವ ಅದರ ಸೇನಾ ನೆಲೆಗಳ ಮೇಲೆ ದಾಳಿ ಮಾಡಿ ತಿರುಗೇಟು ನೀಡಲಾಗುವುದು ಎಂದು ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ನಂತರ ಖಮೇನಿ ನೀಡಿದ ಮೊದಲ ಭಾಷಣದಲ್ಲಿ ಈ ಎಚ್ಚರಿಕೆ ನೀಡಿದ್ದಾರೆ. ಅಮೆರಿಕಾವು ಇರಾನ್‌ನ 3 ಅಣು ಯೋಜನೆಗಳನ್ನು ಗುರಿಯಾಗಿಸಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯನ್ನು ನಾಶಪಡಿಸಿತ್ತು. ಆ ನಂತರ ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಜಾರಿಗೆ ಬಂದಿತು.
ನಾವು ಎಂದಿಗೂ ಅಮೆರಿಕದ ಮುಂದೆ ಶರಣಾಗುವುದಿಲ್ಲ. ಭವಿಷ್ಯದಲ್ಲಿ ನಡೆಯುವ ಯಾವುದೇ ದಾಳಿಗೆ ಅಮೆರಿಕ ದೊಡ್ಡ ಬೆಲೆ ತೆತ್ತಬೇಕಾಗುತ್ತದೆ. ಇರಾನ್‌ಗೆ ಈ ಪ್ರದೇಶದಲ್ಲಿರುವ ಪ್ರಮುಖ ಅಮೆರಿಕನ್ ಕೇಂದ್ರಗಳಿಗೆ ಪ್ರವೇಶವಿದೆ ಮತ್ತು ಅಗತ್ಯವೆನಿಸಿದಾಗ ನಾವು ಕ್ರಮ ಕೈಗೊಳ್ಳಬಹುದು ಎಂದು ಅವರು ತಿಳಿಸಿದರು.
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು