|

ಪುಣೆ – ಮಹಾರಾಷ್ಟ್ರ ರಾಜ್ಯ ಮಾಹಿತಿ ಹಕ್ಕು ಕಾರ್ಯಕರ್ತರ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಪ್ರದೀಪ ನಾಯಕ ಅವರು ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಪಿಂಪರಿ-ಚಿಂಚವಡ ಪೊಲೀಸರಿಂದ ಬಾಂಗ್ಲಾದೇಶಿ ನುಸುಳುಕೋರರ ಬಗ್ಗೆ ಮಾಹಿತಿ ಕೇಳಿದ್ದರು. ಈ ಮಾಹಿತಿಯ ಪ್ರಕಾರ, ಪೊಲೀಸ ಆಯುಕ್ತರ ಕಚೇರಿಯ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ 48 ಬಾಂಗ್ಲಾದೇಶಿ ನಾಗರಿಕರನ್ನು ದೇಶಕ್ಕೆ ಒಳನುಸುಳಿದ ಪ್ರಕರಣಗಳಲ್ಲಿ ಬಂಧಿಸಲಾಗಿದೆ; ಆದರೆ ಅವರಲ್ಲಿ ಒಬ್ಬರನ್ನೂ ಸಹ ಇಲ್ಲಿಯವರೆಗೆ ಬಾಂಗ್ಲಾದೇಶಕ್ಕೆ ಹಿಂದಿರುಗಿಸಲಾಗಿಲ್ಲ ಎಂದು ಪೊಲೀಸರಿಂದ ಉತ್ತರ ಲಭಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ನಾಯಕ ಅವರು, ‘ಈ ನುಸುಳುಕೋರರು ಇನ್ನೂ ಭಾರತದಲ್ಲೇ ಹೇಗೆ ಇದ್ದಾರೆ?’ ಎಂದು ನೇರವಾಗಿ ಪ್ರಶ್ನಿಸಿದ್ದಾರೆ.
ನುಸುಳುಕೋರರ ಪ್ರಕರಣವನ್ನು ‘ರಾಷ್ಟ್ರೀಯ ಭದ್ರತೆ’ ಎಂದು ಪರಿಗಣಿಸಬೇಕು!
ಈ ಉತ್ತರದ ಹಿನ್ನೆಲೆಯಲ್ಲಿ ಪ್ರದೀಪ ನಾಯಕ ಅವರು, ಬಾಂಗ್ಲಾದೇಶಿ ನುಸುಳುಕೋರರು ಕೇವಲ ಅಕ್ರಮವಷ್ಟೇ ಅಲ್ಲದೆ, ರಾಷ್ಟ್ರೀಯ ಭದ್ರತೆಗೂ ದೊಡ್ಡ ಅಪಾಯಕಾರಿಯಾಗಿದೆ. ಆದರೂ, ಅವರ ವಿರುದ್ಧ ಯಾವುದೇ ನಿರ್ದಿಷ್ಟ ಕ್ರಮ ಕೈಗೊಳ್ಳದಿರುವುದು ಆಡಳಿತದ ಗಂಭೀರ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಈ ನುಸುಳುಕೋರರ ವಿರುದ್ಧ ತಕ್ಷಣವೇ ತ್ವರಿತಗತಿ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಿ, ಅವರನ್ನು ಅವರ ದೇಶಕ್ಕೆ ಮರಳಿ ಕಳುಹಿಸಬೇಕು. ಇಂತಹ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ತಕ್ಷಣದ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಮತ್ತು ಸರ್ವೋಚ್ಚ ನ್ಯಾಯಾಲಯವು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಈ ನುಸುಳುಕೋರರ ಪ್ರಕರಣವನ್ನು ‘ರಾಷ್ಟ್ರೀಯ ಭದ್ರತೆ’ ಎಂದು ಪರಿಗಣಿಸಬೇಕು ಎಂದು ಅವರು ಅಪೇಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.
ಸಂಪಾದಕೀಯ ನಿಲುವು
|
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath