ಅಪಘಾತ ಸಂಭವಿಸಿದ ಗುಂಡಿಚಾ ದೇವಸ್ಥಾನದ ಮುಂದೆ ಸಾಕಷ್ಟು ಪೊಲೀಸರು ಇರಲಿಲ್ಲ!

ಭುವನೇಶ್ವರ (ಒಡಿಶಾ) – ಪುರಿಯಲ್ಲಿ ನಡೆಯುತ್ತಿರುವ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ ಜೂನ್ 29 ರಂದು ಬೆಳಗಿನ ಜಾವ 4 ಗಂಟೆಗೆ ಗುಂಡಿಚಾ ದೇವಸ್ಥಾನದ ಮುಂದೆ ನೂಕುನುಗ್ಗಲು ಉಂಟಾಗಿದೆ. ಇದರಲ್ಲಿ 3 ಭಕ್ತರು ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಅವರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದೆ. ಭಗವಾನ್ ಜಗನ್ನಾಥನ ನಂದಿಘೋಷ ರಥದ ಬಳಿ ಈ ನೂಕುನುಗ್ಗಲು ಸಂಭವಿಸಿದೆ. ಈ ಪ್ರಕರಣದಲ್ಲಿ ಸ್ಥಳೀಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆ ಮಾಡಲಾಗಿದ್ದು, ಉಪ ಪೊಲೀಸ್ ಆಯುಕ್ತರು ಮತ್ತು ಇನ್ನೊಬ್ಬ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ರಥ ನೋಡಲು ದೊಡ್ಡ ಜನಸಮೂಹ ಸೇರಿದ್ದಾಗ ಈ ಅಪಘಾತ ಸಂಭವಿಸಿದೆ. ನೂಕುನುಗ್ಗಲು ಸಂಭವಿಸಿದ ಸ್ಥಳದಲ್ಲಿ ಸಾಕಷ್ಟು ಪೊಲೀಸರು ಅಥವಾ ಭದ್ರತಾ ಪಡೆಗಳನ್ನು ನಿಯೋಜಿಸಿರಲಿಲ್ಲ ಎಂದು ಹೇಳಲಾಗುತ್ತಿದೆ. ಈಗ ಎರಡು ದಿನಗಳ ಹಿಂದೆಯಷ್ಟೇ ದೇವಿ ಸುಭದ್ರಾ ರಥದ ಸುತ್ತ ಜನಸಂದಣಿ ಹೆಚ್ಚಾದ ಕಾರಣ 600 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದರು. ಅವರಲ್ಲಿ 9 ಜನರ ಸ್ಥಿತಿ ಗಂಭೀರವಾಗಿದೆ.
ನಿರ್ಲಕ್ಷ್ಯ ಅಕ್ಷಮ್ಯವಾಗಿದೆ! – ಮುಖ್ಯಮಂತ್ರಿ ಮೋಹನ ಚರಣ ಮಾಝಿ

ಒಡಿಶಾದ ಮುಖ್ಯಮಂತ್ರಿ ಮೋಹನ ಚರಣ ಮಾಝಿ ಅವರು ಈ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿ, “ಈ ದುರದೃಷ್ಟಕರ ಘಟನೆ ನನಗೆ ಬಹಳ ದುಃಖವನ್ನುಂಟು ಮಾಡಿದೆ. ನಾನು ಮತ್ತು ನನ್ನ ಸರಕಾರ ಎಲ್ಲ ಜಗನ್ನಾಥ ಭಕ್ತರಲ್ಲಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇವೆ. ಈ ನಿರ್ಲಕ್ಷ್ಯ ಅಕ್ಷಮ್ಯವಾಗಿದೆ. ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳ ತಕ್ಷಣದ ತನಿಖೆಗೆ ನಾನು ಆದೇಶಿಸಿದ್ದೇನೆ” ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಕಳೆದ ವರ್ಷದ ರಥಯಾತ್ರೆಯಲ್ಲೂ ನೂಕುನುಗ್ಗಲು ಉಂಟಾಗಿತ್ತು, ಅಲ್ಲದೆ, 2 ದಿನಗಳ ಹಿಂದೆಯಷ್ಟೇ ನಡೆದ ನೂಕುನುಗ್ಗಲಿನಲ್ಲಿ 600 ಜನರು ಗಾಯಗೊಂಡಿದ್ದರು. ಆದ್ದರಿಂದ ಈಗಲೂ ಸಾಕಷ್ಟು ಪೊಲೀಸ್ ಭದ್ರತೆ ಇಲ್ಲದಿರುವುದು ಅಕ್ಷಮ್ಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಿ, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ