
ಅಕ್ರಾ (ಘಾನಾ) – ಪ್ರಧಾನಮಂತ್ರಿ ಮೋದಿ ಅವರು ಪ್ರಸ್ತುತ ಪಶ್ಚಿಮ ಆಫ್ರಿಕಾದ ದೇಶವಾದ ಘಾನಾ ಪ್ರವಾಸದಲ್ಲಿದ್ದಾರೆ. ಈ ಸಂದರ್ಭದಲ್ಲಿ, ಅವರಿಗೆ ಘಾನಾದ ಅಧ್ಯಕ್ಷ ಜಾನ್ ದ್ರಮಾನಿ ಮಹಾಮಾ ಅವರು ಘಾನಾದ ಎರಡನೇ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯ ಹೆಸರು ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಎಂದಾಗಿದೆ. ಪ್ರಧಾನಮಂತ್ರಿಯವರ ಆಡಳಿತಾತ್ಮಕ ಮತ್ತು ಜಾಗತಿಕ ನಾಯಕತ್ವಕ್ಕಾಗಿ ಅವರಿಗೆ ಈ ಗೌರವ ನೀಡಲಾಗಿದೆ ಎಂದು ಘಾನಾ ಸರಕಾರ ತಿಳಿಸಿದೆ.
ಪ್ರಶಸ್ತಿ ಸ್ವೀಕರಿಸಿದ ನಂತರ ಪ್ರಧಾನಮಂತ್ರಿ ಮೋದಿಯವರು, “ನಾನು ಘಾನಾದ ಜನರಿಗೆ ಮತ್ತು ಸರಕಾರಕ್ಕೆ ಧನ್ಯವಾದ ಹೇಳುತ್ತೇನೆ. ಉಭಯ ದೇಶಗಳ ಯುವಕರ ಭವಿಷ್ಯ, ಅವರ ಮಹತ್ವಾಕಾಂಕ್ಷೆಗಳು, ನಮ್ಮ ಸಮೃದ್ಧ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಎರಡೂ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳಿಗೆ ನಾನು ಈ ಪ್ರಶಸ್ತಿಯನ್ನು ಸಮರ್ಪಿಸುತ್ತೇನೆ. ಭಾರತ ಯಾವಾಗಲೂ ಘಾನಾದೊಂದಿಗೆ ನಿಲ್ಲುತ್ತದೆ ಮತ್ತು ಸ್ನೇಹಿತ ಹಾಗೂ ಅಭಿವೃದ್ಧಿಯ ಪಾಲುದಾರನಾಗಿ ಯಾವಾಗಲೂ ಘಾನಾಗೆ ಸಹಾಯ ಮಾಡುವುದನ್ನು ಮುಂದುವರಿಸುತ್ತದೆ” ಎಂದು ಭರವಸೆ ನೀಡಿದರು.
ವಾಸ್ತವವಾಗಿ, 2008 ರವರೆಗೆ ಇದು ಘಾನಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾಗಿತ್ತು; ಆದರೆ ನಂತರ ‘ಗ್ರ್ಯಾಂಡ್ ಆರ್ಡರ್ ಆಫ್ ದಿ ಸ್ಟಾರ್ ಅಂಡ್ ಈಗಲ್ಸ್ ಆಫ್ ಘಾನಾ’ ಅನ್ನು ಅತ್ಯುನ್ನತ ಪ್ರಶಸ್ತಿ ಎಂದು ಘೋಷಿಸಲಾಯಿತು.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister