
ಮೈಸೂರು – ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಬೇಡಿಕೆಗೆ ಸಂಸದ ಯದುವೀರ ಒಡೆಯರ್ ಬೆಂಬಲ ಸೂಚಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಯದುವೀರ ಒಡೆಯರ್, ‘ನಾನು ಯಾವಾಗಲೂ ವಸ್ತ್ರ ಸಂಹಿತೆಯ ಪರವಾಗಿದ್ದೇನೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ’ ಎಂದರು. ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ತಿರುಪತಿಯ ಮಾದರಿಯಲ್ಲಿ ಚಾಮುಂಡಿ ಬೆಟ್ಟದಲ್ಲಿಯೂ ಮೊಬೈಲ್ ಫೋನ್‌ಗಳ ಬಳಕೆಯನ್ನು ನಿಷೇಧಿಸಬೇಕು. ಇತ್ತೀಚೆಗೆ ಕೆಲವರು ಅರಿವಿಲ್ಲದೆ ದೇವಿಯ ಮೂಲ ವಿಗ್ರಹದ ವೀಡಿಯೊಗಳನ್ನು ಮಾಡುತ್ತಿದ್ದಾರೆ. ಇದರಿಂದ ಧಾರ್ಮಿಕ ಸ್ಥಳದ ಪಾವಿತ್ರ್ಯತೆಗೆ ಭಂಗ ಬರುತ್ತದೆ. ಈ ಸಂಬಂಧ ಸೂಕ್ತ ಕಾನೂನು ರೂಪಿಸಬೇಕು ಎಂದೂ ಅವರು ಒತ್ತಾಯಿಸಿದರು.
🛕👭Implement a Dress Code at Shri Chamundeshwari Temple in Mysuru – @yaduveerwadiyar, Mysuru and Kodagu MP
(Dress code refers to a set of rules regarding clothing to be worn when entering the temple)
👉It is only because born-Hindus have abandoned #spiritual practices that… pic.twitter.com/YlHNYW1F7V
— Sanatan Prabhat (@SanatanPrabhat) July 4, 2025
ಸಂಪಾದಕೀಯ ನಿಲುವುಜನ್ಮತಃ ಹಿಂದೂಗಳು ಧರ್ಮಾಚರಣೆಯನ್ನು ತ್ಯಜಿಸಿದ್ದರಿಂದಲೇ ಇಂತಹ ಬೇಡಿಕೆಗಳನ್ನು ಮುಂದಿಡಬೇಕಾಗಿದೆ. ಮುಸಲ್ಮಾನರಿಗೆ ಅವರ ಧಾರ್ಮಿಕ ಸ್ಥಳಗಳಲ್ಲಿ ಇಂತಹ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸುವಂತೆ ಬೇಡಿಕೆ ಇಡಬೇಕಾಗುತ್ತಿಲ್ಲ ಎಂಬುದನ್ನು ಹಿಂದೂಗಳು ಗಮನಿಸಬೇಕು! |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ