
ಶಿಮ್ಲಾ – ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ 150 ಮನೆಗಳು ಕುಸಿದಿದ್ದು, 63 ಜನರು ಸಾವನ್ನಪ್ಪಿದ್ದಾರೆ. ಮೇಘ ಸ್ಫೋಟದಿಂದಾಗಿ ಹಿಮಾಚಲ ಪ್ರದೇಶವು ₹400 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡಿದೆ. ಹವಾಮಾನ ಇಲಾಖೆಯು, ಜುಲೈ 7, 2025 ರವರೆಗೆ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
1. ಮಂಡಿ ಜಿಲ್ಲೆಯ ಥುನಾಗ್ ಅತಿ ಹೆಚ್ಚು ಹಾನಿಗೊಳಗಾಗಿದ್ದು, ರಸ್ತೆಗಳು ಬಂದ್ ಆಗಿವೆ. ವಿದ್ಯುತ್ ಮತ್ತು ನೀರಿನ ಪೂರೈಕೆಯೂ ಸಹ ನಿಂತಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಾನಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯನ್ನು ವ್ಯಕ್ತಪಡಿಸಿದೆ.
2. ಸಂತ್ರಸ್ತರಿಗಾಗಿ ಸಹಾಯ ಶಿಬಿರಗಳನ್ನು ನಿರ್ಮಿಸಲಾಗಿದ್ದು, ವಾಯುಪಡೆಯು ಸಂತ್ರಸ್ತರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುತ್ತಿದೆ.
3. ಪ್ರವಾಹದಲ್ಲಿ 164 ಜಾನುವಾರುಗಳು ಸಹ ಸಾವನ್ನಪ್ಪಿವೆ. ಒಟ್ಟು 402 ಜನರನ್ನು ರಕ್ಷಿಸಲಾಗಿದೆ.
4. ಶಿಮ್ಲಾದಲ್ಲಿಯೂ ಭೂಕುಸಿತ ಸಂಭವಿಸಿದ್ದು ಅದೃಷ್ಟವಶಾತ್, ಅಲ್ಲಿ ಯಾವುದೇ ಜೀವಹಾನಿ ವರದಿಯಾಗಿಲ್ಲ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!