ಆಸ್ಟ್ರೇಲಿಯಾದಲ್ಲಿ ಯಹೂದಿ ಪ್ರಾರ್ಥನಾ ಮಂದಿರಕ್ಕೆ ಬೆಂಕಿ!

ಮೆಲ್ಬರ್ನ್ (ಆಸ್ಟ್ರೇಲಿಯಾ) – ಯಹೂದಿ ಪ್ರಾರ್ಥನಾ ಮಂದಿರವೊಂದಕ್ಕೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಬೆಂಕಿ ಹಚ್ಚಿದ ಸಮಯದಲ್ಲಿ ಪ್ರಾರ್ಥನಾ ಮಂದಿರದಲ್ಲಿ ಅನೇಕ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಬೆಂಕಿ ಹೊತ್ತಿಕೊಂಡ ನಂತರ, ಭಕ್ತರು ಇನ್ನೊಂದು ಬಾಗಿಲಿನಿಂದ ಹೊರಬಂದರು. ಇದರಿಂದಾಗಿ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಏಳು ತಿಂಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು, ಅದರಲ್ಲಿ ಓರ್ವ ಭಕ್ತ ಗಾಯಗೊಂಡಿದ್ದರು. ಅಕ್ಟೋಬರ್ 7, 2023 ರಿಂದ ಆಸ್ಟ್ರೇಲಿಯಾದಲ್ಲಿ ಯಹೂದಿ-ವಿರೋಧಿ ದಾಳಿಗಳು ಹೆಚ್ಚಾಗಿವೆ. ಈ ದಿನ ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದಾಗಿನಿಂದ ಈ ಎರಡು ಸಮುದಾಯದವರ ನಡುವೆ ಯುದ್ಧ ನಡೆಯುತ್ತಿದೆ.