BRICS Summit : ಬ್ರಿಕ್ಸ್ ಶೃಂಗಸಭೆಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಖಂಡನೆ

(ಬ್ರಿಕ್ಸ್ ಎಂದರೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ಸಂಘಟನೆ)

ಬ್ರಿಕ್ಸ್ ಶೃಂಗಸಭೆಯಲ್ಲಿ ಮೋದಿ, ಇತರ ವಿಶ್ವ ನಾಯಕರು ಭಾಗವಹಿಸಿದ್ದಾರೆ

ರಿಯೊ ಡಿ ಜನೈರೊ (ಬ್ರೆಜಿಲ್) – ಜುಲೈ 6 ರಂದು ಇಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ 126 ಕಲಂಗಳ ಜಂಟಿ ಘೋಷಣಾ ಪತ್ರವನ್ನು ಪ್ರಸಾರ ಮಾಡಲಾಗಿದೆ. ಇದರಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ಖಂಡಿಸಲಾಗಿದೆ.

ಭಯೋತ್ಪಾದನೆಯ ಖಂಡನೆ ನಮ್ಮ ತತ್ವವಾಗಿರಬೇಕು!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಮಾತನಾಡಿ, ಪಹಲ್ಗಾಮನಲ್ಲಿ ನಡೆದ ಭಯೋತ್ಪಾದಕ ದಾಳಿ ಕೇವಲ ಭಾರತದ ಮೇಲಿನ ದಾಳಿಯಲ್ಲ, ಬದಲಾಗಿ ಸಂಪೂರ್ಣ ಮಾನವೀಯತೆಯ ಮೇಲಿನ ದಾಳಿಯಾಗಿದೆ, ಭಯೋತ್ಪಾದನೆಯನ್ನು ಅನುಕೂಲಕ್ಕೆ ತಕ್ಕಂತೆ ಖಂಡಿಸುವುದಾಗಿರದೆ, ಅದು ನಮ್ಮ ತತ್ವವಾಗಬೇಕು ಎಂದು ಹೇಳಿದರು.

ಸಂಪಾದಕೀಯ ನಿಲುವು

ಕೇವಲ ಖಂಡಿಸುವುದಲ್ಲದೆ, ಪಾಕಿಸ್ತಾನವನ್ನು ‘ಭಯೋತ್ಪಾದಕ ದೇಶ’ ಎಂದು ಘೋಷಿಸಿರಿ!