
ಕಣ್ಣೂರು (ಕೇರಳ) – ಕರ್ನಾಟಕದ ಭಾಜಪ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿ ಅಬ್ದುಲ್ ರೆಹಮಾನ್‌ನನ್ನು ರಾಷ್ಟ್ರೀಯ ತನಿಖಾ ದಳ (NIA) ಜುಲೈ 4 ರಂದು ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಕತಾರ್‌ನಿಂದ ಬಂದಿದ್ದ ರೆಹಮಾನ್ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದರು.
೧. ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಗೂಂಡಾಗಳು ನೆಟ್ಟಾರು ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.
೨. ಈ ಪ್ರಕರಣದಲ್ಲಿ ಕೆಲವು ಮುಖ್ಯ ಆರೋಪಿಗಳನ್ನು ಬಂಧಿಸಿದ ನಂತರ ಅಬ್ದುಲ್ ರೆಹಮಾನ್ ತಲೆಮರೆಸಿಕೊಂಡು ಕತಾರ್‌ಗೆ ಪರಾರಿಯಾಗುವ ಮೂಲಕ ಆತ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ.
೩. NIA ನಗದು ಬಹುಮಾನ ಘೋಷಿಸಿದ್ದ 6 ಆರೋಪಿಗಳಲ್ಲಿ ಅಬ್ದುಲ್ ರೆಹಮಾನ್ ಕೂಡ ಒಬ್ಬನಾಗಿದ್ದ. ಆತನನ್ನು ಬಂಧಿಸಿದವರಿಗೆ 4 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.
೪. ಈ ವರ್ಷದ ಏಪ್ರಿಲ್‌ನಲ್ಲಿ ರಾಷ್ಟ್ರೀಯ ತನಿಖಾ ದಳ ಆರೋಪಪಟ್ಟಿ ಸಲ್ಲಿಸಿದ್ದ 4 ವ್ಯಕ್ತಿಗಳಲ್ಲಿ ರೆಹಮಾನ್ ಕೂಡ ಸೇರಿದ್ದ. ಈಗ ಈ ಪ್ರಕರಣದಲ್ಲಿ ಒಟ್ಟು ಆರೋಪಿಗಳ ಸಂಖ್ಯೆ 28 ಆಗಿದೆ.
ಸಂಪಾದಕೀಯ ನಿಲುವುಇಂತಹವರಿಗೆ ಗಲ್ಲು ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸಬೇಕು! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”