|

ಬೆಂಗಳೂರು – ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಕಳೆದ 40 ದಿನಗಳಲ್ಲಿ ಇಲ್ಲಿ ಹೃದಯಾಘಾತದಿಂದ 23 ಜನರು ಮೃತಪಟ್ಟಿದ್ದಾರೆ. ಅವರಲ್ಲಿ 6 ಜನರು 19 ರಿಂದ 25 ವರ್ಷ ವಯೋಮಾನದವರಾಗಿದ್ದರೆ, 8 ಜನರು 25 ರಿಂದ 45 ವರ್ಷ ವಯೋಮಾನದವರಾಗಿದ್ದರು. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ರೋಗಿಗಳ ಸಂಖ್ಯೆಯಲ್ಲಿ ಶೇ. 8ರಷ್ಟು ಹೆಚ್ಚಳ ಕಂಡುಬಂದಿದೆ. ಈ ಘಟನೆಗಳಿಂದಾಗಿ ನಾಗರಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
1. ವೈದ್ಯರು ತಿಳಿಸಿದಂತೆ, ಹಾಸನ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಸಾವಿರಾರು ಜನರು ಮುನ್ನೆಚ್ಚರಿಕೆ ಕ್ರಮವಾಗಿ ಹೃದಯ ಸಂಬಂಧಿ ತಪಾಸಣೆಗಾಗಿ ಪ್ರತಿದಿನ ಮೈಸೂರಿನ ಜಯದೇವ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.
2. ಜಯದೇವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕೆ.ಎಸ್. ಸದಾನಂದ ಅವರು, “ಮಾಧ್ಯಮಗಳಲ್ಲಿ ಸುದ್ದಿಗಳನ್ನು ನೋಡಿದ ನಂತರ ಜನರು ಭಯಭೀತರಾಗಿ ಆಸ್ಪತ್ರೆಗೆ ಧಾವಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಒಮ್ಮೆ ಪರೀಕ್ಷೆ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಜನರು ಹತ್ತಿರದ ಯಾವುದೇ ಆಸ್ಪತ್ರೆಗೆ ಹೋಗಿ ತಮ್ಮ ಹೃದಯವನ್ನು ಪರೀಕ್ಷಿಸಿಕೊಳ್ಳಬೇಕು. ಕೇವಲ ಹೃದಯ ತಪಾಸಣೆ ಮಾಡುವುದರಿಂದ ಭವಿಷ್ಯದ ಸಮಸ್ಯೆಗಳನ್ನು ತಪ್ಪಿಸಲು ಸಾಧ್ಯವಿಲ್ಲ. ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತ ವ್ಯಾಯಾಮ ಮಾಡುವುದು ಸಹ ಆವಶ್ಯಕ ವಾಗಿದೆ ಎಂದು ಹೇಳಿದರು.

3. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಪ್ರತಿ ವರ್ಷ ಸುಮಾರು 6 ಕೋಟಿ ಜನರು ಸಾವನ್ನಪ್ಪುತ್ತಾರೆ. ಇವರಲ್ಲಿ ಸುಮಾರು ಶೇ.32 ರಷ್ಟು ಸಾವುಗಳು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಸಂಭವಿಸುತ್ತವೆ. ಈ ರೋಗವು ಜಗತ್ತಿನಲ್ಲಿ ಅತಿ ಹೆಚ್ಚು ಸಾವುಗಳಿಗೆ ಕಾರಣವಾಗಿದೆ. ಪ್ರತಿ ವರ್ಷ ಸುಮಾರು 1 ಕೋಟಿ 75 ಲಕ್ಷ ಜನರು ಯಾವುದಾದರೂ ಹೃದಯ ಕಾಯಿಲೆಯಿಂದ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
4. ಹಿಂದೆ, ಹೆಚ್ಚಿನ ರೋಗಿಗಳು 60 ವರ್ಷಕ್ಕಿಂತ ಹೆಚ್ಚು ವಯಸ್ಸಿನವರು ಹೃದಯ ಕಾಯಿಲೆಗೆ ಒಳಗಾಗುತ್ತಿದ್ದರು. ಈಗ ಹೊಸ ಸಮಸ್ಯೆಯೆಂದರೆ, ಕಳೆದ ಕೆಲವು ವರ್ಷಗಳಿಂದ 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರೂ ಇದಕ್ಕೆ ಬಲಿಯಾಗುತ್ತಿದ್ದಾರೆ. ಕೊರೋನಾ ಸಾಂಕ್ರಾಮಿಕದ ನಂತರ ಹೃದಯಾಘಾತದ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬರುತ್ತಿದೆ.
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft