
ಬೀಜಿಂಗ್ (ಚೀನಾ) – ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿದರು. ಕಳೆದ ಐದು ವರ್ಷಗಳಲ್ಲಿ ಜೈಶಂಕರ್ ಅವರು ಚೀನಾಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಜೈಶಂಕರ್ ಅವರು ‘ಎಕ್ಸ್’ನಲ್ಲಿ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಭೇಟಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. “ಇಂದು ಬೆಳಿಗ್ಗೆ ಬೀಜಿಂಗ್‌ನಲ್ಲಿ ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಸಚಿವರೊಂದಿಗೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ಮೋದಿ ಅವರ ಪರವಾಗಿ ಕ್ಸಿ ಜಿನ್‌ಪಿಂಗ್ ಅವರಿಗೆ ಶುಭಾಶಯ ತಿಳಿಸಿದೆ” ಎಂದು ಜೈಶಂಕರ್ ಬರೆದಿದ್ದಾರೆ.
ಇದಕ್ಕೂ ಮೊದಲು, ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾದರು. ಈ ಸಭೆಯಲ್ಲಿ, ಎರಡೂ ದೇಶಗಳ ನಡುವೆ ಸ್ಥಿರ ಮತ್ತು ರಚನಾತ್ಮಕ ಸಂಬಂಧಗಳನ್ನು ನಿರ್ಮಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಗಡಿ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು ಮತ್ತು ವ್ಯಾಪಾರ ಅಡೆತಡೆಗಳನ್ನು ನಿವಾರಿಸಲು ಕೆಲಸ ಮಾಡಬೇಕು ಎಂದು ಜೈಶಂಕರ್ ಹೇಳಿದರು. ಪರಸ್ಪರ ಗೌರವ ಮತ್ತು ತಿಳುವಳಿಕೆಯ ಆಧಾರದ ಮೇಲೆ ಭಾರತ-ಚೀನಾ ಸಂಬಂಧಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗಬಹುದು. ಚೀನಾವು ಭಾರತದ ಉತ್ಪಾದನಾ ಕ್ಷೇತ್ರಕ್ಕೆ ಹಾನಿ ಮಾಡುವಂತಹ ಕ್ರಮಗಳನ್ನು ತಪ್ಪಿಸಬೇಕು ಎಂದು ಅವರು ಆಗ್ರಹಿಸಿದರು.
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!
ನಮ್ಮ ಸೈನಿಕರ ಮೈ ಮುಟ್ಟಿದರೂ ಯುದ್ಧ ಭುಗಿಲೇಳುವುದು!
‘ಒಂದು ಬಲಿಷ್ಠ ಪಾಕಿಸ್ತಾನ ಅಮೆರಿಕದ ಹಿತಾಸಕ್ತಿಗೆ ಅತ್ಯಂತ ಅಗತ್ಯ!'(ವಂತೆ) – ಅಮೆರಿಕ
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ