|

ನವದೆಹಲಿ – ಉತ್ತರಾಖಂಡ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿನ ಕಾವಡ ಯಾತ್ರೆಯ ಮಾರ್ಗದಲ್ಲಿರುವ ರೆಸ್ಟೋರೆಂಟ್ ಗಳು, ಹೋಟೆಲ್ ಗಳು ಮತ್ತು ಢಾಬಾಗಳು ಮಾನ್ಯತೆ ಹೊಂದಿದ ನೋಂದಣಿ ಮತ್ತು ಪರವಾನಗಿ (ಲೈಸೆನ್ಸ್) ತೋರಿಸುವುದನ್ನು ಕಡ್ಡಾಯಗೊಳಿಸಿದ ರಾಜ್ಯ ಸರಕಾರಗಳ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಸರಕಾರಗಳ ಈ ಆದೇಶದ ಕಾನೂನುಬದ್ಧತೆಯನ್ನು ಪರಿಶೀಲಿಸಲಾಗುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದರಿಂದಾಗಿ, ಸಂಬಂಧಪಟ್ಟ ಎಲ್ಲ ಹೋಟೆಲ್ ಮತ್ತು ಅಂಗಡಿ ಮಾಲೀಕರು ಕಾನೂನಿನ ಪ್ರಕಾರ ಅಗತ್ಯವಿರುವ ನೋಂದಣಿ ಮತ್ತು ಪರವಾನಗಿ ದಾಖಲೆಗಳನ್ನು ತೋರಿಸುವುದು ಕಡ್ಡಾಯವಾಗಿದೆ. “ನಾವು ಈ ಪ್ರಕರಣದ ವಿವಾದದಲ್ಲಿ ಭಾಗಿಯಾಗುವುದಿಲ್ಲ. ಈ ಅರ್ಜಿಯನ್ನು ಮುಕ್ತಾಯಗೊಳಿಸಲಾಗುತ್ತಿದೆ” ಎಂದು ನ್ಯಾಯಾಲಯ ಹೇಳಿದೆ.
ಯಾವ ಪ್ರಕರಣ?ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರಕಾರಗಳು ಕಾವಡ ಯಾತ್ರೆಯ ಮಾರ್ಗದಲ್ಲಿರುವ ಎಲ್ಲ ಆಹಾರ ಮಾರಾಟ ಕೇಂದ್ರಗಳಿಗೆ ‘ಕ್ಯೂಆರ್ ಕೋಡ್’ ಹಾಕುವುದು ಮತ್ತು ಮಾನ್ಯತೆಯನ್ನು ತೋರಿಸುವುದನ್ನು ಕಡ್ಡಾಯಗೊಳಿಸಿದ್ದವು. ಇದನ್ನು ಕೆಲವು ಕಮ್ಯುನಿಸ್ಟ್ ಕಾರ್ಯಕರ್ತರು ವಿರೋಧಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸುತ್ತಾ ರಾಜ್ಯ ಸರಕಾರಗಳ ನಿರ್ಧಾರವನ್ನು ಎತ್ತಿಹಿಡಿದಿದೆ. |
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!