ಸನ್ಮಾನ್ ಕ್ಯಾಪಿಟಲ್ ಲಿಮಿಟೆಡ್’ನಲ್ಲಿ ಹಣ ದುರುಪಯೋಗ ಪ್ರಕರಣ

ನವದೆಹಲಿ – ‘ಸನ್ಮಾನ್ ಕ್ಯಾಪಿಟಲ್ ಲಿಮಿಟೆಡ್’ (ಹಿಂದಿನ ಇಂಡಿಯಾಬುಲ್ಸ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್) ಪ್ರವರ್ತಕರು ಹಣ ದುರುಪಯೋಗ ಮಾಡಿದ್ದಾರೆ ಎಂಬ ಗಂಭೀರ ಆರೋಪಗಳ ಕುರಿತು ವಿಶೇಷ ತನಿಖಾ ದಳದ ಮೂಲಕ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ.
ಈ ವಿಚಾರಣೆಗೆ ಕೇಂದ್ರ ತನಿಖಾ ದಳ (ಸಿಬಿಐ) ಹಾಜರಾಗದಿದ್ದಕ್ಕೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ನಾವು ಈ ವರ್ತನೆಯನ್ನು ಒಪ್ಪುವುದಿಲ್ಲ. ನಾವು ನೋಟಿಸ್ ನೀಡಿದ ನಂತರ ಅವರು ನ್ಯಾಯಾಲಯಕ್ಕೆ ಹಾಜರಾಗಲೇಬೇಕು. ಅವರು ಸುಪ್ರೀಂ ಕೋರ್ಟ್‌ಗೆ ಹಾಜರಾಗುವುದಿಲ್ಲ ಎಂದು ಹೇಗೆ ಹೇಳಬಹುದು? ಅವರಿಗೆ ನ್ಯಾಯಾಲಯಕ್ಕೆ ಬರುವ ಧೈರ್ಯವೂ ಇಲ್ಲವೇ?” ಎಂದು ನ್ಯಾಯಾಲಯ ಸಿಬಿಐಗೆ ತರಾಟೆಗೆ ತೆಗೆದುಕೊಂಡಿತು.
ಈ ಸಂದರ್ಭದಲ್ಲಿ, ಹೆಚ್ಚುವರಿ ಸಾಲಿಸಿಟರ್ ಜನರಲ್ ಒಂದು ವಾರದ ಸಮಯಾವಕಾಶ ಕೇಳಿದರು. ನ್ಯಾಯಾಲಯ ಇದಕ್ಕೆ ಸಮ್ಮತಿಸಿತು. ಸಿಬಿಐಗೆ ಕ್ರಮ ಕೈಗೊಳ್ಳಲು ಔಪಚಾರಿಕ ದೂರುದಾರರ ಅಗತ್ಯವಿಲ್ಲ ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ನೆನಪಿಸಿತು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!