
ನವದೆಹಲಿ – ದೇಶದ 14ನೇ ಉಪರಾಷ್ಟ್ರಪತಿ ಜಗದೀಪ ಧನಖಡರವರು ಜುಲೈ 21ರ ರಾತ್ರಿ ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಗೆ ಸಲ್ಲಿಸಿದ ರಾಜೀನಾಮೆಯದಲ್ಲಿ ಅವರು `ಆರೋಗ್ಯಕ್ಕೆ ಆದ್ಯತೆ ನೀಡಿ ಮತ್ತು ವೈದ್ಯಕೀಯ ಸಲಹೆಯನ್ನು ಅನುಸರಿಸಿ, ನಾನು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡುತ್ತಿದ್ದೇನೆ’, ಎಂದು ಹೇಳಿದ್ದಾರೆ. 74 ವರ್ಷ ವಯಸ್ಸಿನ ಧನಖಡರವರ ಅಧಿಕಾರಾವಧಿಯು ಆಗಸ್ಟ್ 10, 2027ರವರೆಗೆ ಇತ್ತು. ಅವರು ಜುಲೈ 10ರಂದು ನಡೆದ ಕಾರ್ಯಕ್ರಮವೊಂದರಲ್ಲಿ, `ದೇವರ ಆಶೀರ್ವಾದವಿದ್ದರೆ ನಾನು ಆಗಸ್ಟ್ 2027ರಲ್ಲಿ ನಿವೃತ್ತನಾಗುತ್ತೇನೆ’ ಎಂದು ಹೇಳಿದ್ದರು.
— Vice-President of India (@VPIndia) July 21, 2025
ಸದ್ಯ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಜುಲೈ 21ರಂದು ಧನಖಡರವರು ರಾಜ್ಯಸಭೆಯ ಕಲಾಪದಲ್ಲಿ ಭಾಗವಹಿಸಿದ್ದರು. ಸಭಾಪತಿಯಾಗಿ ಭಾಷಣವನ್ನೂ ಮಾಡಿದ್ದರು. ಅಂದೇ ರಾತ್ರಿ ಅವರು ಅನಿರೀಕ್ಷಿತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ರಾಜೀನಾಮೆ ನೀಡಿದ ಮೊದಲ ಉಪರಾಷ್ಟ್ರಪತಿಯಾಗಿದ್ದಾರೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!