ಸುಪ್ರೀಂ ಕೋರ್ಟ್‌ನಿಂದ ಜಾರಿ ನಿರ್ದೇಶನಾಲಯಕ್ಕೆ (ಇಡಿ) ತರಾಟೆ

ನವದೆಹಲಿ – ವಕೀಲರು ಮತ್ತು ಕಕ್ಷಿದಾರರ ನಡುವಿನ ಸಂಭಾಷಣೆ ವಿಶೇಷ ಅಧಿಕಾರಕ್ಕೆ ಒಳಪಡುತ್ತದೆ. ಅವರ ವಿರುದ್ಧ ನೋಟಿಸ್ ಹೇಗೆ ನೀಡಬಹುದು? ಇದಕ್ಕಾಗಿ ಕೆಲವು ಮಾರ್ಗಸೂಚಿಗಳು ಇರಬೇಕು. ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಎಲ್ಲ ಮಿತಿಗಳನ್ನು ಮೀರುತ್ತಿದ್ದು, ಈ ವ್ಯವಸ್ಥೆಯನ್ನು ರಾಜಕೀಯ ಹೋರಾಟದಲ್ಲಿ ಬಳಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಇಡಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಇಡಿಯಿಂದ ಇಬ್ಬರು ವಕೀಲರಿಗೆ ಸಮನ್ಸ್ ಜಾರಿಗೊಳಿಸಿದ ಪ್ರಕರಣ ಮತ್ತು ರಾಜಕೀಯ ನಾಯಕರ ವಿರುದ್ಧ ನಡೆಯುತ್ತಿರುವ ಕ್ರಮಗಳ ಬಗ್ಗೆ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಅವರ ಪೀಠ ಇಡಿಗೆ ತರಾಟೆಗೆ ತೆಗೆದುಕೊಂಡಿದೆ.
ಇಡಿ,ಯು ಹಿರಿಯ ವಕೀಲರಾದ ಅರವಿಂದ ದಾತಾರ್ ಮತ್ತು ಪ್ರತಾಪ ವೇಣುಗೋಪಾಲ್ ಅವರಿಗೆ ಸಲಹೆ ನೀಡಲು ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿತ್ತು. ಇದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಅರ್ಜಿ ದಾಖಲಿಸಿಕೊಂಡಿದ್ದು, ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ವಿಚಾರಣೆ ನಡೆಸಲಾಯಿತು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!