ಮಧ್ಯಪ್ರದೇಶದ ಹುಲಿ ಸಂರಕ್ಷಣಾ ಅರಣ್ಯದಿಂದ ಹುಲಿ ಪ್ರವಾಹದಲ್ಲಿ ಕೊಚ್ಚಿಹೋಗಿದೆ

ಶ್ರೀನಗರ – ಜಮ್ಮು ಮತ್ತು ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ 5 ಜನರು ಸಾವನ್ನಪ್ಪಿದ್ದಾರೆ. ಮೃತರ ಪೈಕಿ 5 ವರ್ಷದ ಮಗುವೂ ಸೇರಿದೆ. ಈ ದುರಂತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸಂಭವಿಸಿದ ಪ್ರಮುಖ ಘಟನೆಗಳು !
1. ಜಮ್ಮುವಿನ ರಿಯಾಸಿಯ ವೈಷ್ಣೋದೇವಿ ದೇವಾಲಯಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಭೂಕುಸಿತದಲ್ಲಿ 70 ವರ್ಷದ ಯಾತ್ರಾರ್ಥಿಯೊಬ್ಬರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.
2. ಹಿಮಾಚಲ ಪ್ರದೇಶದ ಚಂಬಾದಲ್ಲಿ ಮನೆಯ ಮೇಲೆ ಬಂಡೆ ಕುಸಿದು ನವವಿವಾಹಿತ ದಂಪತಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 401 ರಸ್ತೆಗಳು ಬಂದ್ ಆಗಿವೆ.
3. ಮಧ್ಯಪ್ರದೇಶದಲ್ಲೂ ಧಾರಾಕಾರ ಮಳೆ ಮುಂದುವರಿದಿದ್ದು, ಮಂಡಲಾ ಜಿಲ್ಲೆಯ ಕಾನ್ಹಾ ಹುಲಿ ಸಂರಕ್ಷಣಾ ಅರಣ್ಯದ ಹುಲಿಯೊಂದು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ಬಂಜರ್ ನದಿಯಲ್ಲಿ ಹುಲಿ ಕೊಚ್ಚಿ ಹೋಗುತ್ತಿರುವುದು ಕಂಡುಬಂದಿದೆ.

4. ಹವಾಮಾನ ಇಲಾಖೆಯು ಮಧ್ಯಪ್ರದೇಶದ ಜಬಲಪುರ ಸೇರಿದಂತೆ 12 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಎಚ್ಚರಿಕೆ ನೀಡಿದೆ.
5. ಬಿಹಾರದ 27 ಮತ್ತು ರಾಜಸ್ಥಾನದ 4 ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಮುಂದಿನ ದಿನಗಳಲ್ಲಿ ಮತ್ತೆ ಮಳೆ ಅಬ್ಬರಿಸುವ ಸಾಧ್ಯತೆ!
ಜುಲೈ 24ರ ಸುಮಾರಿಗೆ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಒಂದು ಹೊಸ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!