ಮಂಗಳೂರಿನಲ್ಲಿ ಕುಖ್ಯಾತ ಗೂಂಡಾ ಮೊಹಮ್ಮದ್ ಅಬ್ದುಲ್ ಫಯಾನ್ ಬಂಧನ!

ಮಂಗಳೂರು – ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ, ಕೊಲೆ ಯತ್ನ, ಜೈಲಿನಲ್ಲಿ ಹಲ್ಲೆ ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಗೂಂಡಾ ಮೊಹಮ್ಮದ್ ಅಬ್ದುಲ್ ಫಯಾನ್‌ನನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಅಬ್ದುಲ್ ಫಯಾನ್ ನ್ಯಾಯಾಲಯದಿಂದ ಜಾಮೀನು ಪಡೆದು ಪರಾರಿಯಾಗಿದ್ದ. ಮಂಗಳೂರು ಪೊಲೀಸರು ಆತನನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಈ ಆರೋಪಿಯ ವಿರುದ್ಧ ಕೇರಳ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿಯೂ ಹಲವು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆಯಲ್ಲಿ ನಗರ ಅಪರಾಧ ವಿಭಾಗದ ಅಧಿಕಾರಿಗಳು ಭಾಗಿಯಾಗಿದ್ದರು.