
ಇಸ್ಲಾಮಾಬಾದ್ – ಪಾಕಿಸ್ತಾನ ಎಲ್ಲಾ ವಿವಾದಾತ್ಮಕ ವಿಷಯಗಳ ಬಗ್ಗೆ ಭಾರತದೊಂದಿಗೆ ಅರ್ಥಪೂರ್ಣ ಸಂವಾದ ನಡೆಸಲು ಸಿದ್ಧವಿದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಬ್ರಿಟಿಷ್ ಹೈಕಮಿಷನರ್ ಜೇನ್ ಮ್ಯಾರಿಯಟ್ ಅವರೊಂದಿಗಿನ ಮಾತುಕತೆ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ. ಆದರೂ, ‘ನಾವು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಭಯೋತ್ಪಾದನೆ ವಿಷಯಗಳ ಬಗ್ಗೆ ಮಾತ್ರ ಪಾಕಿಸ್ತಾನದೊಂದಿಗೆ ಚರ್ಚಿಸುತ್ತೇವೆ’ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.
Pak PM’s Drama Continues!
🇵🇰 Shehbaz Sharif says he’s “ready for meaningful dialogue” with India 🤝
But history proves – talks are futile with a nation that thrives on terror! 💣
Pakistan understands weapons, not words! 🔥🛑#Diplomacy #TerrorState pic.twitter.com/uYSluIfP5H
— Sanatan Prabhat (@SanatanPrabhat) July 24, 2025
1. ಭಾರತದೊಂದಿಗೆ ಮಾತುಕತೆಗೆ ಶೆಹಬಾಜ್ ಷರೀಫ್ ಪ್ರಸ್ತಾವನೆ ಸಲ್ಲಿಸಿರುವುದು ಇದು ಮೊದಲ ಬಾರಿಯಲ್ಲ. ಮೇ ತಿಂಗಳ ಆರಂಭದಲ್ಲಿ, ಇರಾನ್ ಭೇಟಿಯಲ್ಲಿದ್ದಾಗ ಷರೀಫ್ ಅವರು ಭಾರತದೊಂದಿಗೆ ಚರ್ಚಿಸುವ ವಿಷಯವನ್ನು ಪ್ರಸ್ತಾಪಿಸಿದ್ದರು. ಆ ಸಮಯದಲ್ಲಿ, ‘ಪಾಕಿಸ್ತಾನಕ್ಕೆ ಶಾಂತಿ ಬೇಕು ಮತ್ತು ಅದಕ್ಕಾಗಿ ಭಾರತದೊಂದಿಗೆ ಚರ್ಚಿಸಲು ಸಿದ್ಧವಿದೆ’ ಎಂದು ಅವರು ಹೇಳಿದ್ದರು.
2. ಆ ಸಮಯದಲ್ಲಿ, ‘ಕಾಶ್ಮೀರ ಸೇರಿದಂತೆ ನಮ್ಮ ಎಲ್ಲಾ ಸಮಸ್ಯೆಗಳನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳ ಪ್ರಕಾರ ಪರಿಹರಿಸುತ್ತೇವೆ’ ಎಂದು ಅವರು ಹೇಳಿದ್ದರು.
3. ‘ಭಾರತ ಗಂಭೀರವಾಗಿದ್ದರೆ, ನಾವು ಸಿಂಧೂ ನದಿಗೆ ಸಂಬಂಧಿಸಿದ ವಿಷಯದ ಬಗ್ಗೆ ಶಾಂತಿಯುತವಾಗಿ ಚರ್ಚಿಸಲು ಸಿದ್ಧರಿದ್ದೇವೆ. ವ್ಯಾಪಾರವನ್ನು ಉತ್ತೇಜಿಸಲು ಮತ್ತು ಭಯೋತ್ಪಾದನೆಯ ವಿರುದ್ಧ ಹೋರಾಡಲು ನಾವು ಚರ್ಚಿಸಲು ಸಿದ್ಧರಿದ್ದೇವೆ’ ಎಂದು ಅವರು ಹೇಳಿದರು. (ಇದರಿಂದ ಪಾಕಿಸ್ತಾನವು ಹದಗೆಟ್ಟ ಸಂಬಂಧಗಳಿಗೆ ಭಾರತವನ್ನೇ ದೂಷಿಸಲು ಪ್ರಯತ್ನಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ! – ಸಂಪಾದಕರು)
ಸಂಪಾದಕೀಯ ನಿಲುವುಪಾಕಿಸ್ತಾನಕ್ಕೆ ಮಾತುಗಳಲ್ಲ, ಶಸ್ತ್ರಾಸ್ತ್ರಗಳ ಭಾಷೆ ಮಾತ್ರ ಅರ್ಥವಾಗುತ್ತದೆ, ಆದ್ದರಿಂದ ‘ಅರ್ಥಪೂರ್ಣ ಸಂವಾದ’ದಿಂದ ಯಾವುದೇ ಪ್ರಯೋಜನ ಇಲ್ಲ ಎಂಬುದು ಅಷ್ಟೇ ಸತ್ಯ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara