
ಬೆಂಗಳೂರು – 2020ರ ಆಗಸ್ಟ್ 11ರಂದು ಇಲ್ಲಿ ಮತಾಂಧ ಮುಸಲ್ಮಾನರು ನಡೆಸಿದ ಗಲಭೆ ಪ್ರಕರಣದಲ್ಲಿ 3 ಜನರಿಗೆ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸೈಯದ್ ಇಕ್ರಮುದ್ದೀನ್ ಅಲಿಯಾಸ್ ಸೈಯದ್ ನವೀದ್ (44 ವರ್ಷ), ಸೈಯದ್ ಆಸಿಫ್ (46 ವರ್ಷ) ಮತ್ತು ಮೊಹಮ್ಮದ್ ಆತಿಫ್ (26 ವರ್ಷ) ಅವರ ವಿರುದ್ಧ ಭಾರತೀಯ ದಂಡ ಸಂಹಿತೆ, ಕರ್ನಾಟಕ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಇಲ್ಲಿನ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನಿವಾಸ ಮತ್ತು ನಗರದ ಪೊಲೀಸ್ ಠಾಣೆಯನ್ನು ಈ ಗಲಭೆಯಲ್ಲಿ ಮುಸಲ್ಮಾನರಿಂದ ಗುರಿಯಾಗಿಸಲಾಗಿತ್ತು.
ಈ ಗಲಭೆಯಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ ರಾಜಕೀಯ ಅಂಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಡುವಿನ ಸಂಬಂಧಗಳು ಬಯಲಾಗಿದ್ದವು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!