ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ

ಲಂಡನ್ (ಬ್ರಿಟನ್) – ಭಾರತ ಮತ್ತು ಬ್ರಿಟನ್ ನಡುವೆ ಇಲ್ಲಿ ‘ಮುಕ್ತ ವ್ಯಾಪಾರ ಒಪ್ಪಂದ’ಕ್ಕೆ ಸಹಿ ಹಾಕಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದದಿಂದಾಗಿ, ಎರಡೂ ದೇಶಗಳ ನಡುವಿನ ವ್ಯಾಪಾರವು ವಾರ್ಷಿಕ ಸುಮಾರು 3 ಲಕ್ಷ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಬಹುದು.

ಈ ಒಪ್ಪಂದದ ಪ್ರಕಾರ ಬ್ರಿಟನ್ ಗೆ, ಭಾರತದಿಂದ ರಫ್ತಾಗುವ 99% ಉತ್ಪನ್ನಗಳ ಮೇಲಿನ ಆಮದು ಸುಂಕದಲ್ಲಿ ವಿನಾಯಿತಿ ಸಿಗಲಿದೆ. ಅದೇ ರೀತಿ, ಬ್ರಿಟಿಷ್ ಸಂಸ್ಥೆಗಳಿಗೆ ಭಾರತದಲ್ಲಿ ವಿಸ್ಕಿ, ನಾಲ್ಕು ಚಕ್ರದ ವಾಹನಗಳು ಮತ್ತು ಇತರ ಉತ್ಪನ್ನಗಳನ್ನು ಮಾರಾಟ ಮಾಡುವುದು ಸುಲಭವಾಗಲಿದೆ. ಭಾರತ ಈ ಉತ್ಪನ್ನಗಳ ಮೇಲಿನ ಸುಂಕವನ್ನು 15% ದಿಂದ 3% ಕ್ಕೆ ಇಳಿಸಲಿದೆ.