
ರಾಯಪುರ (ಛತ್ತೀಸ್‌ಗಢ) – ಛತ್ತೀಸ್‌ಗಢ ರಾಜ್ಯದಲ್ಲಿ ಒಂದೇ ದಿನ 66 ನಕ್ಸಲರು ಸಾಮೂಹಿಕವಾಗಿ ಶರಣಾಗಿದ್ದಾರೆ. ಜುಲೈ 24ರಂದು, ವಿವಿಧ ಜಿಲ್ಲೆಗಳಲ್ಲಿ ನಕ್ಸಲರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರು. ಇವರಲ್ಲಿ ಬಿಜಾಪುರ ಜಿಲ್ಲೆಯಲ್ಲಿ 25 ನಕ್ಸಲರು, ನಾರಾಯಣಪುರದಲ್ಲಿ 8, ಸುಕ್ಮಾದಲ್ಲಿ 5, ದಂತೇವಾಡದಲ್ಲಿ 15, ಹಾಗೂ ಕಾಂಕೇರ್‌ನಲ್ಲಿನ 13 ನಕ್ಸಲರು ಸೇರಿದ್ದಾರೆ. ಈ ಎಲ್ಲಾ 66 ನಕ್ಸಲರ ಮೇಲೆ ಒಟ್ಟು 1 ಕೋಟಿ 30 ಲಕ್ಷ ರೂಪಾಯಿಗಿಂತಲೂ ಹೆಚ್ಚು ಬಹುಮಾನವನ್ನು ಘೋಷಿಸಲಾಗಿತ್ತು. ವಿಶೇಷ ಎಂದರೆ ಶರಣಾದ ನಕ್ಸಲರಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳಾ ನಕ್ಸಲರು ಸೇರಿದ್ದಾರೆ.
1. ಛತ್ತೀಸ್‌ಗಢ ಸರಕಾರ ಮತ್ತು ಭದ್ರತಾ ಸಂಸ್ಥೆಗಳು ವಿಶೇಷ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, 2025ರಲ್ಲಿ ಇಲ್ಲಿಯವರೆಗೆ 1 ಸಾವಿರಕ್ಕೂ ಹೆಚ್ಚು ನಕ್ಸಲರು ಶರಣಾಗಿದ್ದಾರೆ. ಕೇವಲ 2024-25ರ ಅವಧಿಯಲ್ಲಿ 500ಕ್ಕೂ ಹೆಚ್ಚು ನಕ್ಸಲರನ್ನು ಹತ್ಯೆ ಮಾಡಲಾಗಿದೆ.
2. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶರಣಾಗದ ನಕ್ಸಲರ ಬಗ್ಗೆ ಯಾವುದೇ ಮೃದು ಧೋರಣೆ ತೋರುವುದಿಲ್ಲ, ಎಂದು ಸ್ಪಷ್ಟವಾಗಿ ಹೇಳಿದ್ದರು. ಮಾರ್ಚ್ 31, 2026ರೊಳಗೆ ನಕ್ಸಲ್ ವಾದವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ದಿನಾಂಕವಾಗಿ ಘೋಷಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!