‘ಸುರಾಜ್ಯ ಅಭಿಯಾನ’ದಿಂದ ಭಾರತ ಸರಕಾರದ ಬಳಿ ಬೇಡಿಕೆ

ಮುಂಬಯಿ – ದೇಶಾದ್ಯಂತ ಪಿಟ್‌ಬುಲ್, ರಾಟ್‌ವೈಲರ್, ಅಮೆರಿಕನ್ ಬುಲ್ಲಿ, ಡೋಗೋ ಅರ್ಜೆಂಟಿನೋ ಮುಂತಾದ ಹಿಂಸಾತ್ಮಕ ಮತ್ತು ಆಕ್ರಮಣಕಾರಿ ನಾಯಿ ತಳಿಗಳನ್ನು ಸಾಕುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ. ಇಂತಹ ತಳಿಗಳ ನಾಯಿಗಳು ಮಕ್ಕಳು, ಹಿರಿಯ ನಾಗರಿಕರು ಮತ್ತು ಸಾಮಾನ್ಯ ನಾಗರಿಕರ ಮೇಲೆ ಮಾರಣಾಂತಿಕ ದಾಳಿ ನಡೆಸಿವೆ. ಈ ಹಿನ್ನೆಲೆಯಲ್ಲಿ, ಅಪಾಯಕಾರಿ ಪಿಟ್‌ಬುಲ್‌ನಂತಹ ನಾಯಿ ತಳಿಗಳ ಮಾಲೀಕತ್ವ, ಸಂತಾನೋತ್ಪತ್ತಿ ಮತ್ತು ಆಮದನ್ನು ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಉಪಕ್ರಮವಾದ ‘ಸುರಾಜ್ಯ ಅಭಿಯಾನ’ ಕೇಂದ್ರ ಸರಕಾರಕ್ಕೆ ಬೇಡಿಕೆ ಸಲ್ಲಿಸಿದೆ. ‘ಸುರಾಜ್ಯ ಅಭಿಯಾನ’ದ ಮಹಾರಾಷ್ಟ್ರ ರಾಜ್ಯ ಸಂಯೋಜಕ ಶ್ರೀ. ಅಭಿಷೇಕ ಮುರುಕಟೆ ಅವರು ಕೇಂದ್ರ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ ರಂಜನ ಸಿಂಗ್ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ.
1. ನಿಷೇಧಿತ ತಳಿಗಳ ಎಲ್ಲಾ ಪ್ರಾಣಿಗಳನ್ನು ನಿರ್ದಿಷ್ಟ ಸಮಯಮಿತಿಯೊಳಗೆ ಸ್ಥಳೀಯ ಪ್ರಾಣಿ ಕಲ್ಯಾಣ ಸಂಸ್ಥೆಗಳಿಗೆ ಒಪ್ಪಿಸುವುದನ್ನು ಕಡ್ಡಾಯಗೊಳಿಸಬೇಕು.
2. ಈ ತಳಿಗಳ ನಾಯಿಗಳಿಗೆ ಹಿಂಸೆಯ ತರಬೇತಿ ನೀಡುವವರ ಅಥವಾ ಬೆದರಿಕೆ ಹಾಕಲು ಬಳಸುವವರ ವಿರುದ್ಧ ಗಂಭೀರ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು.
3. ಈ ನಾಯಿಗಳ ಅಕ್ರಮ ಮಾಲೀಕತ್ವ ಅಥವಾ ಆಕ್ರಮಣಕಾರಿ ವರ್ತನೆಯ ಬಗ್ಗೆ ದೂರು ನೀಡಲು ಸಾರ್ವಜನಿಕ ಹೆಲ್ಪ್‌ಲೈನ್ ಅಥವಾ ತುರ್ತು ಸಂಖ್ಯೆಯನ್ನು ಪ್ರಾರಂಭಿಸಬೇಕು ಮತ್ತು ಅದನ್ನು ರಾಷ್ಟ್ರವ್ಯಾಪಿ ಪ್ರಚಾರ ಮಾಡಬೇಕು.
4. ಗೋವಾ ವಿಧಾನಸಭೆಯು ಅಂಗೀಕರಿಸಿದ ಮಸೂದೆಯ ಪ್ರಕಾರ, ಯಾವುದೇ ತಳಿ ಅಥವಾ ಪ್ರಾಣಿ ವರ್ಗವನ್ನು ‘ಆಕ್ರಮಣಕಾರಿ’ ಎಂದು ಘೋಷಿಸುವ ಅಧಿಕಾರ ರಾಜ್ಯ ಸರಕಾರಕ್ಕಿದೆ. ಅಧಿಸೂಚನೆಯ ಮೂಲಕ ಘೋಷಿಸಲಾದ ತಳಿಗಳ ಸಾಕಣೆ, ಸಂತಾನೋತ್ಪತ್ತಿ ಮತ್ತು ಆಮದನ್ನು ಗೋವಾದಲ್ಲಿ ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಈ ನೀತಿಯು ರಾಷ್ಟ್ರೀಯ ಮಟ್ಟದಲ್ಲಿ ಕಾನೂನನ್ನು ಜಾರಿಗೊಳಿಸಲು ಮಾದರಿಯಾಗಬಹುದು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!