|

ನವದೆಹಲಿ – ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ನಡೆಸಿದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ‘ಆಪರೇಷನ್ ಸಿಂಧೂರ’ವನ್ನು ಪ್ರಾರಂಭಿಸಿದೆ ಎಂದು ಕೇಂದ್ರ ಸರಕಾರ ಇದೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಮಾಹಿತಿ ನೀಡಿದೆ.
ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ, ‘ಆಪರೇಷನ್ ಸಿಂಧೂರ’ದ ಅಡಿಯಲ್ಲಿ ಭಾರತವು ಮೇ ೭, ೨೦೨೫ ರಂದು ಪಾಕಿಸ್ತಾನದ ೯ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿತು. ಇದರ ನಂತರ, ಪಾಕಿಸ್ತಾನವು ಭಾರತೀಯ ಸೇನಾ ನೆಲೆಗಳು ಮತ್ತು ನಾಗರಿಕರ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು; ಆದರೆ ಇದಕ್ಕೆ ತೀವ್ರ ಪ್ರತಿಕ್ರಿಯೆ ನೀಡಲಾಯಿತು. ಪಾಕಿಸ್ತಾನ ಸೇನೆಗೆ ಭಾರಿ ನಷ್ಟವಾಯಿತು. ಮೇ ೧೦ ರಂದು, ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು ಭಾರತೀಯ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರನ್ನು ಸಂಪರ್ಕಿಸಿ, ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ವಿನಂತಿಸಿದರು. ಅದೇ ದಿನದ ನಂತರ, ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಲಾಯಿತು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”