ಸ್ವಾತಂತ್ರ್ಯವೀರ ಸಾವರಕರರಿಗೆ ಅವಮಾನ ಮಾಡಿದ ಪ್ರಕರಣ

ಮುಂಬಯಿ – ಸ್ವಾತಂತ್ರ್ಯವೀರ ವಿನಾಯಕ ದಾಮೋದರ ಸಾವರಕರ್ ಅವರ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿಕ್ ನ್ಯಾಯಾಲಯವು ಜುಲೈ 24ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಜಾಮೀನು ಮಂಜೂರು ಮಾಡಿದೆ. ರಾಹುಲ್ ಗಾಂಧಿಯವರು ನ್ಯಾಯಾಲಯದ ಮುಂದೆ ಹಾಜರಾಗಲು ಎರಡು ಬಾರಿ ಸಮನ್ಸ್ ನೀಡಲಾಗಿತ್ತು. ನಂತರ ಅವರ ವಿರುದ್ಧ ವಾರಂಟ್ ಜಾರಿ ಮಾಡಲು ಅರ್ಜಿ ಸಲ್ಲಿಸಲಾಗಿತ್ತು. ಆಗ ರಾಹುಲ್ ಗಾಂಧಿಯವರ ವಕೀಲರು, “ಮುಂದಿನ ವಿಚಾರಣೆಯಲ್ಲಿ ಅವರು ಖುದ್ದಾಗಿ ಹಾಜರಾಗುತ್ತಾರೆ” ಎಂದು ಹೇಳಿದ್ದರು. ಅದರಂತೆ ರಾಹುಲ್ ಗಾಂಧಿಯವರು ಆನ್‌ಲೈನ್ ವಿಚಾರಣೆಯಲ್ಲಿ ಹಾಜರಾಗಿದ್ದರು. ಹಾಗಾಗಿ ಅವರಿಗೆ ಜಾಮೀನು ನೀಡಲಾಗಿದೆ.
ರಾಹುಲ್ ಗಾಂಧಿಯವರು ಹಿಂಗೋಲಿಯಲ್ಲಿ ಸ್ವಾತಂತ್ರ್ಯವೀರ ಸಾವರಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. “ವೀರ ಸಾವರಕರ್ ಅವರು ಬ್ರಿಟಿಷ್ ಸರಕಾರ ಬಳಿ ಕ್ಷಮೆಯಾಚಿಸಿದರು ಮತ್ತು ಸರಕಾರದಿಂದ ಆರ್ಥಿಕ ನೆರವು ಪಡೆಯುತ್ತಿದ್ದರು” ಎಂದು ಅವರು ಟೀಕಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿಕ್‌ನ ಸ್ವಾತಂತ್ರ್ಯವೀರ ಸಾವರಕರ್ ಅಭಿಮಾನಿ ದೇವೇಂದ್ರ ಭೂತಡ ಅವರು, ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 500 ಮತ್ತು 504ರ ಅಡಿಯಲ್ಲಿ ಮೊಕದ್ದಮೆ ಹೂಡಿದ್ದರು.
ರಾಹುಲ್ ಗಾಂಧಿಯವರು ಆರೋಪವನ್ನು ಒಪ್ಪಿಕೊಂಡಿಲ್ಲ!
ರಾಹುಲ್ ಗಾಂಧಿಯವರು ಆರೋಪಗಳನ್ನು ನಿರಾಕರಿಸಿದರೂ ಅವರಿಗೆ ಜಾಮೀನು ನೀಡಲಾಗಿದೆ; ಆದರೆ, ಪ್ರಕರಣ ಇನ್ನೂ ಮುಂದುವರಿಯಲಿದೆ. ಜುಲೈ 28ರಿಂದ ನ್ಯಾಯಾಲಯದಲ್ಲಿ ಸಾಕ್ಷಿಗಳನ್ನು ಪರಿಶೀಲಿಸಲಾಗುವುದು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ