ಶಾಂತಿ ಮಾತುಕತೆಗೆ ಹಿಂದೆ ಸರಿದ ಹಮಾಸ್, ಟ್ರಂಪ್ ಕೆಂಡಾಮಂಡಲ

ವಾಷಿಂಗ್ಟನ್ – ಮಾತುಕತೆಯ ಅಂತಿಮ ಹಂತದಲ್ಲಿ ಹಮಾಸ್ ಹಿಂದೆ ಸರಿಯುತ್ತಿದೆ. ಇದು ಅವರಿಗೆ ಹಿಂಸೆಯಲ್ಲಿ ಹೆಚ್ಚು ಆಸಕ್ತಿ ಇದೆ ಎಂದು ತೋರಿಸುತ್ತದೆ. ಗಾಜಾದ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಕ್ಕಳು ಹಸಿವಿನಿಂದ ಕಂಗೆಟ್ಟಿದ್ದಾರೆ. ಈಗ ಮಾತುಕತೆಯಿಂದ ಪರಿಹಾರ ಸಿಗದಿದ್ದರೆ, ಇಸ್ರೇಲ್‌ಗೆ ನಮ್ಮ ಸಲಹೆ ಏನೆಂದರೆ, ಅದು ಹಮಾಸ್ ಅನ್ನು ಸಂಪೂರ್ಣವಾಗಿ ನಾಶಪಡಿಸಬೇಕು. ಇದಕ್ಕೆ ಅಮೆರಿಕದ ಸಂಪೂರ್ಣ ಬೆಂಬಲವೂ ಇರುತ್ತದೆ, ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಮಾಸ್ ವಿರುದ್ಧ ಕ್ರಮ ಕೈಗೊಳ್ಳಲು ಇಸ್ರೇಲ್‌ಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ.
ಕಳೆದ 2 ವರ್ಷಗಳಿಗೂ ಹೆಚ್ಚು ಕಾಲ ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ನಡೆಯುತ್ತಿದೆ. ಹಮಾಸ್‌ಗೆ ಪಾಠ ಕಲಿಸಲು ಇಸ್ರೇಲ್ ಗಾಜಾ ಪಟ್ಟಿಯಲ್ಲಿ ನಡೆಸಿದ ಮಿಲಿಟರಿ ಕಾರ್ಯಾಚರಣೆಯಿಂದ ಇಲ್ಲಿಯವರೆಗೆ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಅಮೆರಿಕದ ಮೂಲಕ ಹಮಾಸ್‌ಗೆ ಶಾಂತಿ ಸ್ಥಾಪನೆಗಾಗಿ ಮಾತುಕತೆಯ ಪ್ರಸ್ತಾಪವನ್ನು ನೀಡಲಾಗಿತ್ತು. ಆದರೆ ಹಮಾಸ್ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ. ಇದರ ನಂತರ ಟ್ರಂಪ್ ಅವರ ಕೋಪವು ಹೆಚ್ಚಾಯಿತು ಮತ್ತು ಅವರು ಈ ಹೇಳಿಕೆ ನೀಡಿದ್ದಾರೆ.
ಗಾಜಾ ಪಟ್ಟಿಯಲ್ಲಿ ಪರಿಸ್ಥಿತಿಯನ್ನು ಸಾಮಾನ್ಯ ಸ್ಥಿತಿಗೆ ತರಲು ಮತ್ತು ಶಾಂತಿ ಸ್ಥಾಪಿಸಲು ಅಮೆರಿಕದ ಸ್ಟೀವ್ ವಿಟ್ಕಾಫ್ ನೇತೃತ್ವದ ತಂಡವನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲಾಗಿತ್ತು; ಆದರೆ ಈಗ ವಿಟ್ಕಾಫ್ ಅವರ ತಂಡವು ಮಾತುಕತೆಗಳಿಂದ ಹಿಂದೆ ಸರಿಯಲು ನಿರ್ಧರಿಸಿದೆ. ಮಾತುಕತೆ ಬದಲು ಬೇರೆ ಮಾರ್ಗ ಅನುಸರಿಸಬೇಕೆಂದು ಅವರು ಸೂಚಿಸಿದ್ದಾರೆ. ಇದರ ನಂತರ, ಟ್ರಂಪ್ ಅವರ ಕೋಪವು ಉತ್ತುಂಗಕ್ಕೇರಿತು.
Hormuz Oil Tankers Explodes : ಎರಡು ತೈಲ ಟ್ಯಾಂಕರ್ ನೌಕೆಗಳಲ್ಲಿ ಸ್ಫೋಟ
ಬುಲೆಟ್ ಟ್ರೇನ ಯೋಜನೆ ವಿಳಂಬಕ್ಕೆ ಭಾರತೀಯ ಸಚಿವರ ನಡವಳಿಕೆಯೇ ಕಾರಣ
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ