
ಲಖನೌ (ಉತ್ತರಪ್ರದೇಶ) – ರಾಜ್ಯದ ಬಾಂದಾ ನಗರದಲ್ಲಿ ಸತೀಶ ಯಾದವ ಎಂಬ ಹಿಂದೂ ಯುವಕ ಆಯಾನ್ ಮತ್ತು ಅಸದ್ ಇಬ್ಬರನ್ನು ರಸ್ತೆಯಿಂದ ಪಕ್ಕಕ್ಕೆ ಸರಿಯುವಂತೆ ಕೇಳಿಕೊಂಡಿದ್ದಾರೆ. ಇದರಿಂದ ಕೋಪಗೊಂಡ ಇಬ್ಬರೂ ಸತೀಶ ಅವರಿಗೆ ಅಮಾನವೀಯವಾಗಿ ಹೊಡೆದು, ಅವರ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ. ರಕ್ತಸಿಕ್ತ ಸ್ಥಿತಿಯಲ್ಲಿ ಸತೀಶ ಯಾದವ ರಸ್ತೆಯಲ್ಲಿ ಕುಸಿದುಬಿದ್ದರು. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಪೊಲೀಸರು ಈ ಪ್ರಕರಣದಲ್ಲಿ ದೂರು ದಾಖಲಿಸಿಕೊಂಡು, ದಾಳಿ ಮಾಡಿದ ಆಯಾನ್ ಮತ್ತು ಅಸದ್ ಅವರನ್ನು ಬಂಧಿಸಿದ್ದಾರೆ. ಬಾಂದಾ ಪೊಲೀಸ್ ಉಪ ಆಯುಕ್ತ ರಾಜೀವ್ ಪ್ರತಾಪ್ ಅವರು ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿ, ಆರೋಪಿಗಳ ವಿರುದ್ಧ ದೂರು ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಸತೀಶ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಅಂಗಡಿಗೆ ಹೋಗಿದ್ದರು. ಅಂಗಡಿಯ ಹೊರಗೆ ಆಯಾನ್ ಮತ್ತು ಅಸದ್ ರಸ್ತೆಯ ಮಧ್ಯದಲ್ಲಿ ನಿಂತಿದ್ದರು. ಸತೀಶ್ ಅವರು ಇಬ್ಬರಿಗೂ ‘ಪಕ್ಕಕ್ಕೆ ಸರಿಯಿರಿ’ ಎಂದು ಸೌಮ್ಯವಾಗಿ ಹೇಳಿದರು. ಅದಕ್ಕೆ ಅವರು ಕೋಪಗೊಂಡು ಸತೀಶ ಮೇಲೆ ಆಕ್ರಮಣ ಮಾಡಿದರು.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!