
ಶ್ರೀನಗರ – ಪೂಂಚ್‌ನ ಗಡಿ ನಿಯಂತ್ರಣ ರೇಖೆಯ ಬಳಿ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕ್ ಬೆಂಬಲಿತ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ಭಾರತೀಯ ಸೇನೆ ನೀಡಿದ ಮಾಹಿತಿಯ ಪ್ರಕಾರ, ಜುಲೈ 29 ರ ತಡರಾತ್ರಿ ದೇಗ್ವಾರ್ ಸೆಕ್ಟರ್‌ನ ಮಾಲ್ಡಿವೆಲನ್ ಪ್ರದೇಶದ ಗಡಿಯಲ್ಲಿ ನಿಯೋಜಿಸಲಾಗಿದ್ದ ಸೈನಿಕರಿಗೆ ಕೆಲವು ಅನುಮಾನಾಸ್ಪದ ಚಲನ-ವಲನಗಳು ಕಂಡುಬಂದವು. ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು. ಈ ಭಯೋತ್ಪಾದಕರಿಂದ 3 ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸಿದವು. ಈ ಕಾರ್ಯಾಚರಣೆಗೆ ‘ಆಪರೇಷನ್ ಶಿವಶಕ್ತಿ’ ಎಂದು ಹೆಸರಿಡಲಾಗಿತ್ತು. ಪಾಕ್ ಬೆಂಬಲಿತ ಭಯೋತ್ಪಾದಕರು ಅಡಗಿರುವ ಬಗ್ಗೆ ಗೌಪ್ಯ ಮಾಹಿತಿ ಲಭಿಸಿದ ನಂತರ ಭಾರತೀಯ ಸೇನೆ ಅವರನ್ನು ಪತ್ತೆಹಚ್ಚುವ ಕಾರ್ಯಾಚರಣೆ ನಡೆಸಿತು.
ಎರಡು ದಿನಗಳ ಹಿಂದೆ, ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿಯಾಗಿ ನಡೆಸಿದ ‘ಆಪರೇಷನ್ ಮಹಾದೇವ’ ಅಡಿಯಲ್ಲಿ ಶ್ರೀನಗರದ ದಾಚಿಗಾಮ್ ರಾಷ್ಟ್ರೀಯ ಉದ್ಯಾನವನದ ಸಮೀಪವಿರುವ ಹರ್ವಾನ್ ಪ್ರದೇಶದಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಈ ಮೂವರು ಭಯೋತ್ಪಾದಕರು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!