ಪಾಕಿಸ್ತಾನದೊಂದಿಗೆ ತೈಲ ಒಪ್ಪಂದ ಮಾಡಿಕೊಂಡಿ ಅಮೆರಿಕ !

ವಾಷಿಂಗ್ಟನ್ (ಅಮೆರಿಕ) – ಅಮೆರಿಕ ಮತ್ತು ಪಾಕಿಸ್ತಾನ ಜಂಟಿಯಾಗಿ ಪಾಕಿಸ್ತಾನದಲ್ಲಿರುವ ಬೃಹತ್ ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವ ಒಪ್ಪಂದಕ್ಕೆ ನಾವು ಸಹಿ ಹಾಕಿದ್ದೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ. ಈ ಸಹಭಾಗಿತ್ವಕ್ಕಾಗಿ ಒಂದು ತೈಲ ಸಂಸ್ಥೆಯನ್ನು ಆಯ್ಕೆ ಮಾಡಲಾಗುವುದು. ಬಹುಶಃ ಒಂದು ದಿನ ಪಾಕಿಸ್ತಾನವು ಭಾರತಕ್ಕೂ ತೈಲವನ್ನು ಮಾರಾಟ ಮಾಡಬಹುದು ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನ ಸರಕಾರವು 2026ರ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ಸೂಚಿಸಿದೆ.
ಕಳೆದ ವರ್ಷ ಪಾಕಿಸ್ತಾನದಲ್ಲಿ ತೈಲ ನಿಕ್ಷೇಪಗಳು ಪತ್ತೆ

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನದ ಕರಾವಳಿ ಗಡಿಯಲ್ಲಿ ದೊಡ್ಡ ಪ್ರಮಾಣದ ತೈಲ ಮತ್ತು ಅನಿಲ ನಿಕ್ಷೇಪಗಳು ಪತ್ತೆಯಾಗಿದ್ದವು. ಈ ನಿಕ್ಷೇಪಗಳು ವಿಶ್ವದ ನಾಲ್ಕನೇ ಅತಿದೊಡ್ಡ ತೈಲ ಮತ್ತು ಅನಿಲ ನಿಕ್ಷೇಪಗಳಾಗಿವೆ. ಪ್ರಸ್ತುತ ವೆನೆಜುವೆಲಾ ಅತಿ ದೊಡ್ಡ ತೈಲ ನಿಕ್ಷೇಪವನ್ನು ಹೊಂದಿದೆ, ಇದು 34 ಲಕ್ಷ ಬ್ಯಾರೆಲ್ ತೈಲವನ್ನು ಹೊಂದಿದೆ. ಅದೇ ಸಮಯದಲ್ಲಿ, ಅಮೆರಿಕವು ಇನ್ನೂ ಬಳಸದ ಅತ್ಯಂತ ಶುದ್ಧ ತೈಲ ನಿಕ್ಷೇಪವನ್ನು ಹೊಂದಿದೆ. ಪಾಕಿಸ್ತಾನವು ತೈಲ ಮತ್ತು ಅನಿಲವನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರೆ, ಅದು ಅದರ ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ತೈಲ ಅಥವಾ ಅನಿಲವನ್ನು ಹೊರತೆಗೆಯಲು 4-5 ವರ್ಷಗಳು ಬೇಕಾಗಬಹುದು. ಇದಕ್ಕೆ ಸಂಬಂಧಿಸಿದ ಸಂಶೋಧನೆಯನ್ನು ಪೂರ್ಣಗೊಳಿಸಲು ಸುಮಾರು 42 ಸಾವಿರ ಕೋಟಿ ರೂಪಾಯಿ ವೆಚ್ಚವಾಗಲಿದೆ.
ಸಂಪಾದಕೀಯ ನಿಲುವುಒಂದೆಡೆ ಇರಾನ್‌ನೊಂದಿಗೆ ಇತರ ದೇಶಗಳ ಸಂಸ್ಥೆಗಳು ತೈಲ ವ್ಯಾಪಾರ ಮಾಡಿದಾಗ ಅಮೆರಿಕವು ಅವುಗಳ ಮೇಲೆ ನಿಷೇಧ ಹೇರುತ್ತದೆ. ಮತ್ತೊಂದೆಡೆ, ‘ಭಯೋತ್ಪಾದಕ ರಾಷ್ಟ್ರ’ ಎಂದು ಘೋಷಿಸಬೇಕಾದ ಪಾಕಿಸ್ತಾನದೊಂದಿಗೆ ತೈಲ ಒಪ್ಪಂದ ಮಾಡಿಕೊಂಡು ಭಾರತವನ್ನು ಕೆಣಕುತ್ತದೆ. ಇದರಿಂದ ಅಮೆರಿಕವು ಭಾರತದ ಮಿತ್ರನಲ್ಲ, ಬದಲಿಗೆ ಶತ್ರು ಎಂಬುದು ಸ್ಪಷ್ಟವಾಗುತ್ತದೆ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation