ಇಂದು ಶಿಕ್ಷೆ ಪ್ರಕಟಿಸಲಾಗುವುದು

ಬೆಂಗಳೂರು (ಕರ್ನಾಟಕ) – ಅನೇಕ ಮಹಿಳೆಯರ ಲೈಂಗಿಕ ಶೋಷಣೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ, ಜನತಾ ದಳ (ಸೆಕ್ಯುಲರ್) ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಘೋಷಿಸಲಾಗಿದೆ. ಅವರಿಗೆ ಆಗಸ್ಟ್ 2 ರಂದು ಶಿಕ್ಷೆ ಪ್ರಕಟಿಸಲಾಗುವುದು.
ಪ್ರಜ್ವಲ್ ರೇವಣ್ಣ ಅವರು ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ. ಕಳೆದ 14 ತಿಂಗಳುಗಳಿಂದ ಅವರು ಜೈಲಿನಲ್ಲಿದ್ದಾರೆ. ಅವರ ನೂರಾರು ಆಕ್ಷೇಪಾರ್ಹ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. ಆ ನಂತರ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದರು. ಪ್ರಜ್ವಲ್ ರೇವಣ್ಣ ಅವರ ವಕೀಲರು ಅವರಿಗೆ ಜಾಮೀನು ನೀಡಲು ಅನೇಕ ಬಾರಿ ಪ್ರಯತ್ನಿಸಿದರು, ಆದರೆ ನ್ಯಾಯಾಲಯವು ಪ್ರತಿ ಬಾರಿಯೂ ಜಾಮೀನು ನೀಡಲು ನಿರಾಕರಿಸಿತು. ‘ಅವರು ಪ್ರಭಾವಿ ಕುಟುಂಬದ ವ್ಯಕ್ತಿಯಾಗಿದ್ದು, ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಬಹುದು’ ಎಂದು ನ್ಯಾಯಾಲಯ ಹೇಳಿತ್ತು. ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಕೂಡ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದವು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!