ಪೊಲೀಸರಿಂದ ಬಂಧನ

ಅಮರಾವತಿ (ಆಂಧ್ರಪ್ರದೇಶ) – ಆಂಧ್ರಪ್ರದೇಶದ ಸಚಿವ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಬಿ.ಸಿ. ಜನಾರ್ದನ್ ರೆಡ್ಡಿ ಅವರ ಸಹೋದರ, ನಂದ್ಯಾಲ್ ಜಿಲ್ಲೆಯ ಕೋಲಿಮಿಗುಂಡ್ಲಾ ದೇವಸ್ಥಾನದಲ್ಲಿ ಜಸ್ವಂತ್ ಎಂಬ ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾನೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಪ್ರಕರಣದಲ್ಲಿ ರೆಡ್ಡಿಯನ್ನು ಬಂಧಿಸಲಾಗಿದೆ.
ಜಸ್ವಂತ್ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದರು. ಪ್ರವೇಶ ನಿಷಿದ್ಧವಿರುವ ಪ್ರದೇಶಕ್ಕೆ ಹೋಗದಂತೆ ಅವರು ಸಚಿವರ ಸಹೋದರ ಬಿ.ಸಿ. ಮದನ್ ಭೂಪಾಲ್ ರೆಡ್ಡಿ ಅವರನ್ನು ತಡೆದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ವಾಗ್ವಾದ ತೀವ್ರಗೊಂಡು ಮದನ್ ರೆಡ್ಡಿಯು ಪೊಲೀಸ್ ಸಿಬ್ಬಂದಿಯನ್ನು ಹಿಂದಕ್ಕೆ ತಳ್ಳಿ ಅವರಿಗೆ ಕಪಾಳಕ್ಕೆ ಹೊಡೆದಿದ್ದಾರೆ.
ಸಚಿವ ಬಿ.ಸಿ. ಜನಾರ್ದನ್ ರೆಡ್ಡಿ ಅವರು ತಮ್ಮ ಸಹೋದರನ ಕೃತ್ಯವನ್ನು ಸಾರ್ವಜನಿಕವಾಗಿ ಖಂಡಿಸಿದ್ದಾರೆ. “ಇಂತಹ ಕೃತ್ಯ ಎಸಗಿದವರು ಯಾರೇ ಆಗಿರಲಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾನು ಪೊಲೀಸರಿಗೆ ತಿಳಿಸಿದ್ದೇನೆ” ಎಂದವರು ಹೇಳಿದ್ದಾರೆ.
ಸಂಪಾದಕೀಯ ನಿಲುವುಸಹೋದರ ಮಂತ್ರಿ ಎಂಬ ಅಹಂಕಾರದಿಂದ ಹೀಗೆ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!