ಭಾರತವು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆ ಎಂಬ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ ಭಾರತ ! – India Rejects Trump’s Claim

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್

ವಾಷಿಂಗ್ಟನ್ (ಅಮೆರಿಕ) – “ಭಾರತದ ಸರಕಾರಿ ತೈಲ ಶುದ್ಧೀಕರಣ ಘಟಕಗಳು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿವೆ. ಇದು ಒಂದು ಉತ್ತಮ ಕ್ರಮ” ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಆದರೆ, ಟ್ರಂಪ್ ಹೀಗೆ ಹೇಳಿದ್ದರೂ, ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿಲ್ಲ ಎಂದು ಸರಕಾರ ಈಗಾಗಲೇ ಸ್ಪಷ್ಟಪಡಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಮಾರುಕಟ್ಟೆ ಮತ್ತು ಜಾಗತಿಕ ಪರಿಸ್ಥಿತಿಯನ್ನು ನೋಡಿಕೊಂಡು ಭಾರತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದರು.

ರಷ್ಯಾ-ಉಕ್ರೇನ್ ಯುದ್ಧದ ಸಮಯದಲ್ಲಿ ರಷ್ಯಾದ ಆದಾಯವನ್ನು ಕಡಿಮೆ ಮಾಡಲು ಅಮೆರಿಕ ಒತ್ತಡ ಹೇರುತ್ತಿದೆ. 2022ರಿಂದ ಭಾರತವು ರಷ್ಯಾದಿಂದ ಅಗ್ಗದ ತೈಲವನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸುವ ದೇಶವಾಗಿದೆ. ಆದರೆ, ಇತ್ತೀಚೆಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದುಸ್ತಾನ್ ಪೆಟ್ರೋಲಿಯಂ ಮತ್ತು ಭಾರತ್ ಪೆಟ್ರೋಲಿಯಂನಂತಹ ಭಾರತೀಯ ತೈಲ ಕಂಪನಿಗಳು ಕಡಿಮೆ ರಿಯಾಯಿತಿ ಮತ್ತು ಸಾರಿಗೆ ಸಮಸ್ಯೆಗಳಿಂದಾಗಿ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿವೆ ಎಂಬ ವರದಿಗಳು ಬಂದಿದ್ದವು.