|

ವಾರಣಾಸಿ (ಉತ್ತರ ಪ್ರದೇಶ) – ಪ್ರತಿಯೊಬ್ಬ ಭಾರತೀಯ ನಾಗರಿಕ, ವ್ಯಾಪಾರಿ, ಮತ್ತು ಗ್ರಾಹಕರು ಸ್ವದೇಶಿ ಉತ್ಪನ್ನಗಳನ್ನು ಬಳಸುವ ಪ್ರತಿಜ್ಞೆ ತೆಗೆದುಕೊಳ್ಳುವ ಸಮಯ ಬಂದಿದೆ. ‘ವೋಕಲ್ ಫಾರ್ ಲೋಕಲ್’ (ಸ್ಥಳೀಯವಾಗಿ ತಯಾರಾದ ವಸ್ತುಗಳನ್ನು ಪ್ರೋತ್ಸಾಹಿಸುವ ಉಪಕ್ರಮ) ಮತ್ತು ‘ಮೇಕ್ ಇನ್ ಇಂಡಿಯಾ’ (ಭಾರತದಲ್ಲಿ ತಯಾರಾದ ವಸ್ತುಗಳನ್ನು ಪ್ರೋತ್ಸಾಹಿಸುವ ಅಭಿಯಾನ) ಇವು ಕೇವಲ ಘೋಷಣೆಗಳಾಗಿ ಉಳಿಯದೆ, ನಮ್ಮ ದೈನಂದಿನ ಜೀವನದ ಭಾಗವಾಗಬೇಕು. ಇದು ಕೇವಲ ಸರಕಾರದ ಕೆಲಸವಲ್ಲ, ಪ್ರತಿಯೊಬ್ಬ ನಾಗರಿಕನು ತನ್ನ ಜವಾಬ್ದಾರಿಯಾಗಿ ಇದನ್ನು ನೋಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷರು ಇತ್ತೀಚೆಗೆ ಭಾರತದ ಆರ್ಥಿಕತೆಯನ್ನು ‘ಮೃತ’ ಎಂದು ಕರೆದಿದ್ದರಿಂದ ಪ್ರಧಾನಿಯವರು ಈ ಹೇಳಿಕೆ ನೀಡಿದ್ದಾರೆ ಎಂದು ಚರ್ಚೆಯಾಗುತ್ತಿದೆ.
ಮೋದಿ ಅವರು ಮಾತು ಮುಂದುವರಸಿ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿ ವೇಗವಾಗಿ ಮುನ್ನಡೆಯುತ್ತಿದೆ. ಇಂತಹ ಸಮಯದಲ್ಲಿ, ಪ್ರತಿಯೊಬ್ಬ ನಾಗರಿಕನು ನಮ್ಮ ಬೆವರು ಮತ್ತು ಶ್ರಮದಿಂದ ತಯಾರಾದ ಭಾರತೀಯ ಉತ್ಪನ್ನಗಳನ್ನು ಮಾತ್ರ ಆರಿಸಬೇಕು. ಜಾಗತಿಕ ಅಸ್ಥಿರತೆ, ರಷ್ಯಾ-ಉಕ್ರೇನ್ ಯುದ್ಧ ಮತ್ತು ಚೀನಾ-ಅಮೆರಿಕ ವ್ಯಾಪಾರ ಉದ್ವಿಗ್ನತೆಯ ಸಮಯದಲ್ಲಿ ಭಾರತವು ತನ್ನ ಹಿತಾಸಕ್ತಿಗಳಿಗೆ ಆದ್ಯತೆ ನೀಡಬೇಕಾಗಿದೆ ಎಂದು ಪ್ರಧಾನಿ ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!