ಕಮಲಾ ಹ್ಯಾರಿಸ್: ರಾಜಕೀಯ ನಿವೃತ್ತಿ ಘೋಷಣೆ

ವಾಷಿಂಗ್ಟನ್ (ಅಮೇರಿಕಾ) – ಅಮೇರಿಕಾದ ಮಾಜಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಅವರು ಕಾರ್ಯಕ್ರಮವೊಂದರಲ್ಲಿ ನೀಡಿದ ಸಂದರ್ಶನದಲ್ಲಿ, ಈಗ ಕ್ಯಾಲಿಫೋರ್ನಿಯಾದ ಗವರ್ನರ್ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು. ಅಮೇರಿಕಾದ ರಾಜಕೀಯ ವ್ಯವಸ್ಥೆ ಹದಗೆಟ್ಟಿದ್ದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ತಾನು ಅಷ್ಟು ಪ್ರಬಲವಾಗಿಲ್ಲ ಎಂದು ಹ್ಯಾರಿಸ್ ವಿಷಾದ ವ್ಯಕ್ತಪಡಿಸಿದರು.

ಕಳೆದ ವರ್ಷ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರು ಡೆಮಾಕ್ರಟಿಕ್ ಪಕ್ಷದಿಂದ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಸ್ಪರ್ಧಿಸಿದ್ದರು. ಟ್ರಂಪ್ ಗೆ ಎಲೆಕ್ಟೋರಲ್ ಕಾಲೇಜು ನಲ್ಲಿ 312 ಮತಗಳು ಸಿಕ್ಕಿತು, ಆದರೆ ಹ್ಯಾರಿಸ್ 226 ಮತಗಳಿಗೆ ಸಮಾಧಾನಗೊಳ್ಳಬೇಕಾಯಿತು.