
ರಾಂಚಿ (ಜಾರ್ಖಂಡ್) – ರಾಜ್ಯಸಭಾ ಸಂಸದರು ಹಾಗೂ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರು 81ನೇ ವಯಸ್ಸಿನಲ್ಲಿ ಆಗಸ್ಟ್ 4ರಂದು ಬೆಳಿಗ್ಗೆ ನಿಧನರಾದರು. ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ ಬ್ರೈನ್ ಸ್ಟ್ರೋಕ್ (ಮೆದುಳಿಗೆ ರಕ್ತ ಪೂರೈಕೆ ಸ್ಥಗಿತ) ಆಗಿತ್ತು, ಇದರಿಂದ ಅವರ ದೇಹದ ಎಡಭಾಗಕ್ಕೆ ಪಾರ್ಶ್ವವಾಯು ಉಂಟಾಗಿತ್ತು. ಅವರು ದೀರ್ಘಕಾಲದಿಂದ ಮೂತ್ರಪಿಂಡದ ಕಾಯಿಲೆಯಿಂದಲೂ ಬಳಲುತ್ತಿದ್ದರು. ಕೆಲವು ವರ್ಷಗಳ ಹಿಂದೆ ಅವರ ಹೃದಯದ ಶಸ್ತ್ರಚಿಕಿತ್ಸೆಯೂ ಆಗಿತ್ತು.
ಶಿಬು ಸೊರೆನ್ ಅವರು ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಸಂಸ್ಥಾಪಕರಾಗಿದ್ದರು. ಸಂಯುಕ್ತ ಪ್ರಗತಿಪರ ಒಕ್ಕೂಟ (UPA) ಸರಕಾರದ ಮೊದಲ ಅವಧಿಯಲ್ಲಿ (2004-2009) ಅವರು ಕಲ್ಲಿದ್ದಲು ಸಚಿವರಾಗಿದ್ದರು. ಚಿರುಡಿಹ್ ಹತ್ಯಾಕಾಂಡದಲ್ಲಿ ಅವರ ಹೆಸರು ಕೇಳಿಬಂದ ನಂತರ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಅವರು ಸುಮಾರು ಎರಡು ವರ್ಷಗಳ ಕಾಲ ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ