ಮುಂಬಯಿ – ಮಹಾದೇವಿ ಆನೆಯನ್ನು ಮತ್ತೆ ನಾಂದಣಿ ಮಠಕ್ಕೆ (ಕೊಲ್ಹಾಪುರ ಜಿಲ್ಲೆ) ಕರೆತರಬೇಕೆಂಬುದು ಜನರ ಆಶಯವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮಠವು ಸರ್ವೋಚ್ಚ ನ್ಯಾಯಾಲಯದಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು. ರಾಜ್ಯ ಸರಕಾರವೂ ಸಹ ಪ್ರತ್ಯೇಕ ಮರುಪರಿಶೀಲನಾ ಅರ್ಜಿ ಸಲ್ಲಿಸಿ, ಆನೆಯನ್ನು ಹಿಂದಿರುಗಿಸುವ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ತನ್ನ ನಿಲುವನ್ನು ಪ್ರಸ್ತುತಪಡಿಸಲಿದೆ ಎಂದು ಮಹಾರಾಷ್ಟ್ರ ಸರಕಾರದ ಪರವಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು. ಆನೆಯನ್ನು ಮಠಕ್ಕೆ ತರುವ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಚಿವಾಲಯದಲ್ಲಿ ಸಭೆ ನಡೆಯಿತು.
ಮುಖ್ಯಮಂತ್ರಿಗಳು ಮಾತನಾಡಿ, ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾನದಂಡಗಳು ಮತ್ತು ಉನ್ನತ ಮಟ್ಟದ ಸಮಿತಿಯು ಸೂಚಿಸಿದ ಎಲ್ಲಾ ಅಂಶಗಳನ್ನು ಪರಿಹರಿಸಲಾಗುವುದು. ಆನೆಯ ಆರೈಕೆಗಾಗಿ ವೈದ್ಯರು ಸೇರಿದಂತೆ ರಾಜ್ಯ ಸರಕಾರವು ಒಂದು ತಂಡವನ್ನು ರಚಿಸಿ ಎಲ್ಲಾ ಅಗತ್ಯ ನೆರವು ನೀಡಲಿದೆ. ಈ ಪ್ರಕರಣದಲ್ಲಿ ನಾಗರಿಕರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಲಾಗುವುದು.

ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಅಜಿತ ಪವಾರ, ಅರಣ್ಯ ಸಚಿವ ಗಣೇಶ ನಾಯಕ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಚಂದ್ರಕಾಂತ ಪಾಟೀಲ, ಜಲಸಂಪನ್ಮೂಲ ಸಚಿವ ಗಿರೀಶ ಮಹಾಜನ, ವೈದ್ಯಕೀಯ ಸಚಿವ ಹಸನ್ ಮುಶ್ರಿಫ್, ಆರೋಗ್ಯ ಸಚಿವ ಪ್ರಕಾಶ ಆಬಿಟ್ಕರ ಮತ್ತು ನಾಂದಣಿ ಮಠದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!