ಅಮೇರಿಕಾದ ರಾಷ್ಟ್ರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇವರಿಗೆ ಅವರದೇ ಪಕ್ಷದ ಭಾರತೀಯ ಮೂಲದ ನಿಕ್ಕಿ ಹ್ಯಾಲೆ ಅವರಿಂದ ಎಚ್ಚರಿಕೆ

ವಾಷಿಂಗ್ಟನ್ (ಅಮೇರಿಕಾ) – ಭಾರತವು ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸಬಾರದು; ಆದರೆ ಚೀನಾವು ಅಮೆರಿಕಾದ ವಿರೋಧಿಯಾಗಿದೆ. ರಷ್ಯಾ ಮತ್ತು ಇರಾನ್‌ನಿಂದ ಕಚ್ಚಾ ತೈಲವನ್ನು ಖರೀದಿಸುವಲ್ಲಿ ಚೀನಾದ ಪಾಲು ದೊಡ್ಡದಿದೆ. ಅಂತಹ ದೇಶಕ್ಕೆ ಆಮದು ಸುಂಕದಿಂದ 90 ದಿನಗಳ ವಿನಾಯಿತಿ ನೀಡಲಾಗಿದೆ. ಒಂದು ಕಡೆ ಚೀನಾಕ್ಕೆ ವಿನಾಯಿತಿ ನೀಡುವುದು ಸರಿಯಲ್ಲ. ಇನ್ನೊಂದೆಡೆ, ಅಮೆರಿಕವು ಭಾರತದಂತಹ ಪ್ರಬಲ ರಾಷ್ಟ್ರದೊಂದಿಗೆ ತನ್ನ ಸಂಬಂಧವನ್ನು ಹಾಳು ಮಾಡಿಕೊಳ್ಳುವುದು ಸರಿಯಲ್ಲ, ಎಂದು ಅಮೆರಿಕಾದಲ್ಲಿ ಆಡಳಿತಾರೂಢ ರಿಪಬ್ಲಿಕನ್ ಪಕ್ಷದ ಭಾರತೀಯ ಮೂಲದ ನಾಯಕಿ ನಿಕ್ಕಿ ಹ್ಯಾಲೆ ಅವರು ‘X’ ನಲ್ಲಿ ಪೋಸ್ಟ್ ಮಾಡುವ ಮೂಲಕ ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕೆರೊಲಿನಾದ ಮಾಜಿ ಗವರ್ನರ್ ಆಗಿದ್ದ ನಿಕ್ಕಿ ಹ್ಯಾಲೆ ಅವರು ಡೊನಾಲ್ಡ್ ಟ್ರಂಪ್ ಅವರ ಮೊದಲ ಅಧಿಕಾರಾವಧಿಯಲ್ಲಿ ವಿಶ್ವಸಂಸ್ಥೆಯಲ್ಲಿ ಅಮೆರಿಕಾದ ರಾಯಭಾರಿಯಾಗಿದ್ದರು. ಅಮೆರಿಕಾದ ಆಡಳಿತದಲ್ಲಿ ಕ್ಯಾಬಿನೆಟ್ ಮಟ್ಟದಲ್ಲಿ ನೇಮಕಗೊಂಡ ಭಾರತೀಯ ಮೂಲದ ಮೊದಲ ನಾಯಕಿ ಇವರಾಗಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation