ವೈಟ್ ಹೌಸ್ ನ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಪತ್ರಕರ್ತರ ಪ್ರಶ್ನೆಗೆ ಟ್ರಂಪ್ ರವರ ಹಾಸ್ಯಾಸ್ಪದ ಉತ್ತರ!

ವಾಷಿಂಗ್ಟನ (ಅಮೆರಿಕ) – ಭಾರತವು ರಷ್ಯಾದಿಂದ ತೈಲವನ್ನು ಖರೀದಿಸುತ್ತದೆ ಮತ್ತು ಅದರಿಂದ ಬರುವ ಹಣದಿಂದ ರಷ್ಯಾ ಉಕ್ರೇನನೊಂದಿಗೆ ಯುದ್ಧ ಮಾಡುತ್ತದೆ ಎಂದು ಆರೋಪಿಸಿ, ಅಮೆರಿಕವು ಭಾರತದ ಮೇಲೆ ಶೇ 25 ರಷ್ಟು ಆಮದು ಸುಂಕವನ್ನು ವಿಧಿಸಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಭಾರತವು, ಅಮೆರಿಕಾ ಸ್ವತಃ ರಷ್ಯಾದಿಂದ ಯುರೇನಿಯಂ ಸೇರಿದಂತೆ ಇತರ ಉತ್ಪನ್ನಗಳನ್ನು ಖರೀದಿಸುತ್ತದೆ ಎಂದು ಬಹಿರಂಗಪಡಿಸಿತ್ತು. ಈ ವಿಷಯದ ಕುರಿತು ವೈಟ್ ಹೌಸ್ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಪತ್ರಕರ್ತರೊಬ್ಬರು ಟ್ರಂಪ್ ಅವರನ್ನು ಪ್ರಶ್ನಿಸಿದಾಗ, ಅವರು ದಿಗ್ಭ್ರಮೆಗೊಂಡರು. ಅವರು ಮಾತನಾಡಿ, “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಅಮೆರಿಕವು ರಷ್ಯಾದಿಂದ ರಾಸಾಯನಿಕ ಪದಾರ್ಥಗಳು ಮತ್ತು ಗೊಬ್ಬರಗಳನ್ನು ಆಮದು ಮಾಡಿಕೊಳ್ಳುತ್ತದೆ ಎಂಬ ಕಲ್ಪನೆ ನನಗಿಲ್ಲ. ನಾನು ಈ ಬಗ್ಗೆ ತನಿಖೆ ಮಾಡುತ್ತೇನೆ,” ಎಂದು ಹೇಳಿದರು.
ಭಾರತವು ಅಮೆರಿಕಾ ತನ್ನ ಪರಮಾಣು ಕಾರ್ಯಕ್ರಮ ಮತ್ತು ವಿದ್ಯುತ್ ವಾಹನಗಳ ಉದ್ಯಮಕ್ಕಾಗಿ ರಷ್ಯಾದಿಂದ ಯುರೇನಿಯಂ ಹೆಕ್ಸಾಫ್ಲೋರೈಡ್, ಪಲ್ಲಾಡಿಯಂ, ಗೊಬ್ಬರ ಮತ್ತು ರಾಸಾಯನಿಕ ಪದಾರ್ಥಗಳನ್ನು ಆಮದು ಮಾಡಿಕೊಳ್ಳುತ್ತದೆ ಎಂದು ಹೇಳಿತ್ತು.
ಸಂಪಾದಕೀಯ ನಿಲುವು
|
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation