|
(ಮೌಲ್ವಿ ಎಂದರೆ ಇಸ್ಲಾಂ ಧರ್ಮದ ಧಾರ್ಮಿಕ ಮುಖಂಡ)

ಬೆಳಗಾವಿ – ಇಲ್ಲಿನ ಕಾಮುಕ ಮೌಲ್ವಿಯೊಬ್ಬ 2 ವರ್ಷಗಳ ಹಿಂದೆ 5 ವರ್ಷದ ಬಾಲಕಿಯನ್ನು ಮಸೀದಿಯೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಮಾಹಿತಿಯನ್ನು ಹಿಂದುತ್ವನಿಷ್ಠ ಪುನೀತ್ ಕೆರೆಹಳ್ಳಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಕಾಮುಕ ಮೌಲ್ವಿಯನ್ನು ಬಂಧಿಸಿದ್ದಾರೆ.
ಜಿಲ್ಲೆಯ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 2 ವರ್ಷಗಳ ಹಿಂದೆ ಮಸೀದಿಯ ಮೌಲ್ವಿಯಿಂದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು; ಆದರೆ ಮಗಳ ಭವಿಷ್ಯ ಮತ್ತು ಸಾಮಾಜಿಕ ಘನತೆಗೆ ಹೆದರಿ ಸಂತ್ರಸ್ತ ಕುಟುಂಬ ದೂರು ನೀಡಿರಲಿಲ್ಲ.

ನಂತರ ಸಂತ್ರಸ್ತೆಯ ತಂದೆ ಹಿಂದುತ್ವನಿಷ್ಠ ಪುನೀತ್ ಕೆರೆಹಳ್ಳಿ ಅವರಿಗೆ ದೂರವಾಣಿ ಕರೆ ಮಾಡಿ ತಮ್ಮ ಮಗಳ ಮೇಲಾದ ಅನ್ಯಾಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರ ಆಧಾರದ ಮೇಲೆ ಕೆರೆಹಳ್ಳಿ ಅವರು ಘಟನೆಯ ಸಂಪೂರ್ಣ ಮಾಹಿತಿ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಮೇಲೆ ಪೊಲೀಸರು ಕಾನೂನು ಪ್ರಕಾರ ಸ್ವಯಂಪ್ರೇರಿತರಾಗಿ ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬದಿಂದ ಅಧಿಕೃತ ದೂರು ದಾಖಲಿಸಿಕೊಂಡಿದ್ದಾರೆ. (ಬೆಳಗಾವಿ ಪೊಲೀಸರ ತ್ವರಿತ ಕ್ರಮ ಶ್ಲಾಘನೀಯ! ಸಂತ್ರಸ್ತ ಕುಟುಂಬ ಪೊಲೀಸರ ಬಳಿಗೆ ಹೋಗದೆ ಹಿಂದೂ ಮುಖಂಡನ ಬಳಿ ನ್ಯಾಯಕ್ಕಾಗಿ ಮೊರೆ ಹೋಗಬೇಕಾಯಿತು, ಈ ಬಗ್ಗೆ ಪೊಲೀಸರು ಆತ್ಮಾವಲೋಕನ ಮಾಡಿಕೊಳ್ಳಬೇಕು! – ಸಂಪಾದಕರು)
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ